ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚುತ್ತಲಿದ್ದು, ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸ್ಟ್ರಿಕ್ಟ್ ರೂಲ್ಸ್; ಸರ್ಕಾರದಿಂದ ಹೊಸ ಆದೇಶ
ಶುಕ್ರವಾರ ರಾತ್ರಿಯಿಂದ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. ಇದೀಗ ಶುಕ್ರವಾರ ರಾತ್ರಿ ಮತ್ತೆ ಬೆಂಕಿ ಹೊತ್ತಿಕೊಂಡಿದ್ದು, ಕಿಡಿಗೇಡಿಗಳಿಂದ ಬೆಂಕಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: BEL ನಿಂದ 350 ಹುದ್ದೆಗೆ ಅರ್ಜಿ ಆಹ್ವಾನ; ಆಕರ್ಷಕ ಸಂಬಳ












