ಸಂಬಳ ಕೇಳಿದಕ್ಕೆ ಹಲ್ಲೆ : ಐವರು ಆರೋಪಿಗಳ ಬಂಧನ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಸೋಮ್ಲಾಪುರ ಕಾಡಿನಲ್ಲಿ ಇತ್ತೀಚೆಗೆ ವ್ಯಕ್ತಿ ಒಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 

ಇದನ್ನೂ ಓದಿ; ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ

ಕೆಲಸದ ಹಣ ಕೇಳಿದ್ದಕ್ಕೆ ಎನ್.ಆರ್.ಪುರ ತಾಲ್ಲೂಕು ಮೇಲ್ಪಾಲ್‌ನ ಕಾರ್ಮಿಕ ಸತೀಶ್ ಎಂಬುವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.

ಇದನ್ನೂ ಓದಿ; ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?

ಕೊಪ್ಪದ ಮಹೇಶ್, ಶಿರಿಲ್, ವಿಠಲ್, ಸುನಿಲ್ ಕಟ್ಟೆಹಕ್ಲು, ಮಂಜು ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

 

ಭದ್ರಾ ನದಿ ತೀರದಲ್ಲಿ ವಾಮಾಚಾರ | ಐದಾರು ಕುರಿ-ಮೇಕೆಗಳ ಬಲಿ ಕೊಟ್ಟಿರುವ ಕಿಡಿಗೇಡಿಗಳು

ಕಳಸ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಬೃಹತ್ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳನ್ನು ಬಲಿ ಕೊಡಲಾಗಿದೆ. ನದಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

 

ಇದನ್ನೂ ಓದಿ; ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್

ಹೊರನಾಡಿಗೆ ಹೋಗುವ ಮುಖ್ಯರಸ್ತೆ ಬಳಿಯೇ ಈ ಕೃತ್ಯ ನಡೆದಿದ್ದು, ವಾಮಾಚಾರಕ್ಕೆ ಬಳಸಿದ್ದ ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ ನದಿ ದಡದಲ್ಲಿ ಪತ್ತೆಯಾಗಿವೆ ಹಾಗೂ ಭದ್ರಾ ನದಿಯಲ್ಲಿ 5-6 ಕುರಿ- ಮೇಕೆಗಳ ಶವ ಕೂಡಾ ಪತ್ತೆಯಾಗಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಕೋಳಿ ಅಂಕ ಕಡಿವಾಣಕ್ಕೆ ಸಜ್ಜು

ರಾತ್ರಿ ವೇಳೆ ನಡೆದಿರುವ ವಾಮಾಚಾರದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ವಾಮಾಚಾರದ ರಹಸ್ಯ ಭೇದಿಸಲು ಪೊಲೀಸರು ಮುಂದಾಗಿದ್ದು, ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನದಿಯಿಂದ ಮೇಕೆ-ಕುರಿಗಳ ಶವ ಹೊರಕ್ಕೆ ತೆಗೆದಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.