ಬೆಳ್ತಂಗಡಿ: (ನ್ಯೂಸ್ ಮಲ್ನಾಡ್ ವರದಿ) ಬಾಳೆಹಣ್ಣು ಖರೀದಿಸುವ ನೆಪದಲ್ಲಿ ಎರಡು ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನು ಮಡಿಕೇರಿ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆತಂದು ತನಿಖೆ ನಡೆಸಿದ್ದಾರೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ

ಏನಿದು ಪ್ರಕರಣ:
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಇಸುಬು ಎಂಬವರ ಬಾಳೆಹಣ್ಣು ಮತ್ತು ಅಡಿಕೆ ಅಂಗಡಿಯ ಕ್ಯಾಶ್ ನಿಂದ ಅಪರಿಚಿತ ವ್ಯಕ್ತಿ ನ.15 ರಂದು 450 ಬಾಳೆಹಣ್ಣು ಖರೀದಿಸುವ ನೆಪದಲ್ಲಿ ಎರಡು ಲಕ್ಷ ರೂಪಾಯಿ ಕಳ್ಳತನದ ಪ್ರಕರಣ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು. ಹಾಸನ ಜಿಲ್ಲೆಯ ಮಹಮ್ಮದ್ ಇಕ್ಬಾಲ್ (56) ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಮಹಮ್ಮದ್ ಶಹಬಾದ (25) ನನ್ನು ಡಿ.30 ರಂದು ಕರೆತಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನಂತರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಿ 20 ಸಾವಿರ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಇಬ್ಬರು ಆರೋಪಿಗಳನ್ನು ಡಿ.31 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ವಾಪಸ್ ಮಡಿಕೇರಿ ಜೈಲಿಗೆ ಕಳುಹಿಸಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಕೊಕ್ಕಡ ಕಳ್ಳತನ ಪ್ರಕರಣದಲ್ಲಿ ಆರೋಪಿಗಳ ಬಗ್ಗೆ ಸಿಸಿಕ್ಯಾಮರ ಹಾಗೂ ಟೆಕ್ನಿಕಲ್ ಆಧಾರದಲ್ಲಿ ಮಾಹಿತಿ ಕಲೆ ಹಾಕಿ ಧರ್ಮಸ್ಥಳ ಪೊಲೀಸರ ತಂಡ ಮಡಿಕೇರಿಗೆ ಹೋಗಿ ಕಾರ್ಯಾಚರಣೆ ಮಾಡುತ್ತಿರುವ ಕೆಲ ಗಂಟೆಗಳ ಮೊದಲು ಆರೋಪಿಗಳಿಬ್ಬರು ಮಡಿಕೇರಿ ಜಿಲ್ಲೆಯ ಸೋಮವಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿರುವಾಗ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಮಡಿಕೇರಿ ಜೈಲು ಪಾಲಾಗಿದ್ದರು.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
ಇನ್ನು ಉಡುಪಿ, ದಕ್ಷಿಣ ಕನ್ನಡ, ಮಡಿಕೇರಿ ಜಿಲ್ಲೆಯಲ್ಲಿ ಮಹಮ್ಮದ್ ಇಕ್ಬಾಲ್ ವಿರುದ್ಧ 8 ಪ್ರಕರಣ ಹಾಗೂ ಮಹಮ್ಮದ್ ಶಹಬಾದ ವಿರುದ್ಧ 3 ಪ್ರಕರಣ ದಾಖಲಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: CBSE ಯಿಂದ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ













