ಕಡೂರು: (ನ್ಯೂಸ್ ಮಲ್ನಾಡ್ ವರದಿ) ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಕಾರು ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ

ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು, ನೋಡ ನೋಡುತ್ತಿದ್ದಂತೆ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಕಾರಿನ ತುಂಬಾ ಆವರಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಕಡೂರು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ
ಎನ್.ಆರ್ ಪುರ: 30ಕ್ಕೂ ಹೆಚ್ಚು ಮಂಗಗಳ ಮಾರಣಹೋಮ
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) 30 ಮಂಗಗಳನ್ನು ಕೊಂದು ರಸ್ತೆಗೆ ತಂದು ಎಸೆದು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ
ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು, ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಂದಿದ್ದು, 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿದೆ ಎನ್ನಲಾಗಿದೆ. 16 ಗಂಡು, 14 ಹೆಣ್ಣು, 4 ಮರಿಗಳ ಮಾರಣ ಹೋಮ ನಡೆದಿದ್ದು, ಸ್ಥಳಕ್ಕೆ ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
ಈ ಕುರಿತು ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












