ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದ ಕಾರಿಗೆ ಅಡ್ಡಲಾಗಿ ಜಿಂಕೆ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಹೊರನಾಡಿನಿಂದ ಮೂಡಿಗೆರೆಗೆ ಹೋಗುತ್ತಿದ್ದ ಸಂದರ್ಭ ಸಂಪಿಗೆಖಾನ್ ಎಂಬಲ್ಲಿ ಕಾರಿಗೆ ಜಿಂಕೆ ಅಡ್ಡ ಬಂದು ಈ ಘಟನೆ ನಡೆದಿದೆ.
ಇದನ್ನೂ ಓದಿ; 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ

ಮೂಡಿಗೆರೆಯ ಮುತ್ತಿಗೆ ಪುರ ಗ್ರಾಮದ ಡ್ರೈವರ್ ಸೇರಿ ಒಂದೇ ಕುಟುಂಬದ ನಾಲ್ಕು ಜನ ಹೊರನಾಡಿಗೆ ಬಂದು ದೇವರ ದರ್ಶನ ಮುಗಿಸಿ ಮರಳಿ ಮೂಡಿಗೆರೆಗೆ ತೆರಳುತ್ತಿದ್ದ ಸಂದರ್ಭ ಸಂಪಿಖಾನ್ ಎಂಬಲ್ಲಿ ಕಾರಿಗೆ ಜಿಂಕೆ ಅಡ್ಡ ಬಂದಿದೆ. ಜಿಂಕೆಯನ್ನು ತಪ್ಪಿಸುವ ಯತ್ನದಲ್ಲಿ ಕಾರು ಚರಂಡಿಗೆ ಉರುಳಿ ಒಬ್ಬ ಮಹಿಳೆಯ ಕೈಗೆ, ಇನ್ನೊಬ್ಬರ ತಲೆಗೂ ಹಾಗೂ ಕಾಲಿಗೆ ಪೆಟ್ಟಾಗಿದ್ದು, ಕೂಡಲೇ ಸ್ಥಳೀಯರು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅಮಾನತು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿ ಜಿಲ್ಲಾದ್ಯಕ್ಷ ಎಚ್ ಸಿ ಕಲ್ಕುರುಡಪ್ಪ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಪಕ್ಷದ ತೀರ್ಮಾನಗಳನ್ನು ಪದೇ ಪದೇ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಪಕ್ಷದ ಘನತೆಗೆ ಕುಂದುಂಟು ಮಾಡಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಅಲ್ಲದೇ ಹಲವು ಬಾರಿ ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ತಿಳಿಸಿದರೂ ಇದುವರೆಗೂ ಸಮಜಾಯಿಷಿ ನೀಡಿರುವುದಿಲ್ಲ. ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ನಿಮ್ಮನ್ನು (ವರಸಿದ್ದಿ ವೇಣುಗೋಪಾಲ್) ಅಮಾನತು ಮಾಡಲಾಗಿದೆ” ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ರಾಜೀನಾಮೆ ವಾಪಸ್ ಪಡೆದಿದ್ದ ವೇಣುಗೋಪಾಲ್:
ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿ ನಗರಸಭೆ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ಜಟಾಪಟಿ ನಡೆಯುತ್ತಿದ್ದು, ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವರಸಿದ್ದಿ ವೇಣುಗೋಪಾಲ್ ಇತ್ತೀಚೆಗೆ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದರು.
20 ವರ್ಷಗಳಿಂದ ಸಿ.ಟಿ.ರವಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ವೇಣುಗೊಪಾಲ್, ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದರು ರಾಜೀನಾಮೆ ನೀಡಿರಲಿಲ್ಲ. ಎರಡು ಬಾರಿ ರಾಜೀನಾಮೆ ನೀಡಿ ಅಂಗೀಕಾರವಾಗುವ ಮುನ್ನವೆ ಹಿಂಪಡೆದಿದ್ದರು. ಪಕ್ಷದ ಆಂತರಿಕ ತೀರ್ಮಾನವನ್ನ ಉಲ್ಲಂಘಿಸಿದ ಹಿನ್ನೆಲೆ ಇಂದು ಅಮಾನತು ಮಾಡಲಾಗಿದೆ.












