ಚಿಕ್ಕಮಗಳೂರು: ನಗರದಲ್ಲಿ ಒಂಟಿ ಸಲಗ ತಿರುಗಾಟ; ಸ್ಥಳೀಯರಲ್ಲಿ ಆತಂಕ

ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಗುರುವಾರ (ಮಾ.13) ರಾತ್ರಿ ಒಂಟಿ ಸಲಗ ತಿರುಗಾಡಿದ್ದು, ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ರೇಷನ್‌ ಕಾರ್ಡ್‌ ಮತ್ತೆ ಪರಿಷ್ಕರಣೆ!; ಅನರ್ಹರಿಗೆ ರದ್ದಾಗುತ್ತಾ?


ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ.


ಇದನ್ನೂ ಓದಿ: ಅಡುಗೆಮನೆಯಲ್ಲಿ ಈ 2 ಪಾತ್ರೆಗಳನ್ನ ಉಲ್ಟಾ ಇಡಬೇಡಿ!; ಲಕ್ಷ್ಮಿ ಮುನಿಸಿಗೆ ನೀವು ಬಡವರಾಗ್ತೀರಿ!


ಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಹಠಾತ್ ಆನೆಯ ದರ್ಶನವಾದ ಹಿನ್ನೆಲೆಯಲ್ಲಿ ನಲ್ಲೂರಿನ ನಿವಾಸಿಗಳು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 1003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 15,000 ಸಂಬಳ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.