ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಯುವಕ ಅನುಮಾನಾಸ್ಪದ ಕಣ್ಮರೆ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪ್ರವಾಸಕ್ಕೆ ಬಂದಿದ್ದ ಯುವಕ ಅನುಮಾನಾಸ್ಪದ ಕಣ್ಮರೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡ ಬಳಿ ನಡೆದಿದೆ.

 

ಇದನ್ನೂ ಓದಿ; ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬೆಳ್ತಂಗಡಿ ತಾಲೂಕಿನ ಕೊಯ್ಯುರು ಗ್ರಾಮದ ದೀಕ್ಷಿತ್ (27) ನಾಪತ್ತೆಯಾದ ಯುವಕ. ದೇವರಮನೆ ಗುಡ್ಡಕ್ಕೆ ನಾಲ್ಕು ಜನ ಯುವಕರು ಪ್ರವಾಸಕ್ಕೆ ಬಂದಿದ್ದಾಗ ಗುಡ್ಡೆತೋಟ ಬಳಿ ಕಾರು ನಿಲ್ಲಿಸಿ ಜಗಳವಾಡಿಕೊಂಡಿದ್ದಾರೆ. ಮಾತಿನ ಚಕಮಕಿ ಬಳಿಕ ಸಿಟ್ಟು ಮಾಡಿಕೊಂಡು ದೀಕ್ಷಿತ್ ಕಾರು ಹತ್ತದೆ ಹೋಗಿದ್ದಾನೆ. ನಾಲ್ಕು ಯುವಕರಲ್ಲಿ ಓರ್ವ ನಾಪತ್ತೆಯಾಗಿದ್ದಾನೆ.

 

ಇದನ್ನೂ ಓದಿ; ರಾಜ್ಯದಲ್ಲಿ ಪಟಾಕಿ ಬ್ಯಾನ್; ದೀಪಾವಳಿಗೂ ಪಟಾಕಿ ಹೊಡೀಬಾರದಾ?;  ಸಿದ್ದರಾಮಯ್ಯ ಹೇಳಿದ್ದೇನು?

ರಾತ್ರಿಯಿಡಿ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿಗಳಿಂದ ಯುವಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದು, ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಚಾರ್ಮಾಡಿ ಘಾಟ್‌ ತಿರುವುಗಳಿಗೆ ಬ್ರೇಕ್; ಅಭಿವೃದ್ಧಿ ಯೋಜನೆಗೆ ಕೇಂದ್ರದ ಹಸಿರು ನಿಶಾನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿ ರಸ್ತೆಯ ಚಾರ್ಮಾಡಿ ಹಳ್ಳದಿಂದ ಘಾಟಿಯ 11ನೇ ತಿರುವು ವರೆಗಿನ 11.2 ಕಿ.ಮೀ ಅಭಿವೃದ್ಧಿಯ 490 ಕೋಟಿ ವೆಚ್ಚದ ಕಾಮಗಾರಿಗೆ ಸಂಬಂಧಿಸಿದ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ.

 

ಈ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಯ ಮೊದಲ ಹಂತ ಬಂಟ್ವಾಳದ ಬಿ.ಸಿ ರೋಡ್ ನಿಂದ ಪುಂಜಾಲಕಟ್ಟೆವರೆಗೆ ಪೂರ್ಣಗೊಂಡಿದ್ದು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಕಾಮಗಾರಿ ಪ್ರಗತಿಯಲ್ಲಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರನೇ ಹಂತದ ಈ ಕಾಮಗಾರಿಯ ಡಿಪಿಆರ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಚಾರ್ಮಾಡಿ ಘಾಟಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 25 ಕಿ.ಮೀ ವ್ಯಾಪ್ತಿ ಹೊಂದಿದೆ. ಈ ಪೈಕಿ ದಕ್ಷಿಣ ಕನ್ನಡ ಭಾಗದ 11.20 ಕಿ.ಮೀ. ರಸ್ತೆ ಅಭಿವೃದ್ಧಿ ಹೊಂದಲಿದೆ. ರಸ್ತೆ 10 ಮೀಟರ್ ಅಗಲವಾಗಲಿದೆ. 7,745 ಕೋಟಿ ವೆಚ್ಚದಲ್ಲಿ ದೇಶದ ಒಟ್ಟು 588 ಕಿ.ಮೀ ರಸ್ತೆಯ 21 ಯೋಜನೆಗಳ ಪ್ರಸ್ತಾವಕ್ಕೆ ಅನುಮೋದನೆ ಲಭಿಸಿದೆ. ಈ ಯೋಜನೆಗಳಲ್ಲಿ ಚಾರ್ಮಾಡಿ ಘಾಟಿಯ ಅಭಿವೃದ್ಧಿಯೂ ಸೇರಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಮೌಲಿಕ್ ಎ ತಿಳಿಸಿದರು.

ರಸ್ತೆ ಅಭಿವೃದ್ಧಿಯಿಂದ ಪ್ರಯಾಣಿಕರಿಗೆ ಅನುಕೂಲ:
ಸೌ೦ದರ್ಯದ ಜೊತೆ ಅಪಾಯಕಾರಿಯೂ ಆಗಿರುವ ಚಾರ್ಮಾಡಿ ಘಾಟಿ ಪರಿಸರದಲ್ಲಿ ಸಾಕಷ್ಟು ಗುಡ್ಡಗಳು, ಬಂಡೆಕಲ್ಲು, ಮರಗಳು ಇದ್ದು, ಇವೆಲ್ಲ ರಸ್ತೆಗೆ ಉರುಳಿ ಬೀಳುವುದು ಮಳೆಗಾಲದಲ್ಲಿ ಸಾಮಾನ್ಯವಾಗಿದೆ. ವಾಹನ ದಟ್ಟಣೆಯೂ ಅಧಿಕವಿರುವ ಕಾರಣ ಘಾಟ್ ಪರಿಸರದ ರಸ್ತೆ ಅಗಲೀಕರಣ ಅಗತ್ಯವಾಗಿತ್ತು. ರಸ್ತೆ ಅಭಿವೃದ್ಧಿಯಿಂದ ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.