
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಪ್ರವಾಸಿ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದ ಬಳಿ ನಿನ್ನೆ ನಡೆದಿದೆ. ನವಮಿ (30) ಮೃತ ದುರ್ದೈವಿ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡ್ತಿದ್ದ ನವಮಿಗೆ ತುಮಕೂರು ಜಿಲ್ಲೆಯ ತಿಪಟೂರು ಮೂಲದ ಪ್ರವಾಸಿ ಗಾಡಿ ಡಿಕ್ಕಿಯಾಗಿದೆ. ಪರಿಣಾಮ ನವಮಿ ಸಾವನ್ನಪ್ಪಿದ್ದು, ಅಪಘಾತದ ಬಳಿಕ ಗಾಡಿ ಕೂಡ ನಿಲ್ಲಿಸದೆ ಹೋಗಿದ್ದಾನೆ. ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಸಿ.ಟಿ ರವಿ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ನಿನ್ನೆ ನಡೆಯಬೇಕಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಮುಂದೂಡಿಕೆ:
ಹಿಟ್ ಅಂಡ್ ರನ್ ಗೆ ಆಲ್ದೂರಿನ ಮಹಿಳೆ ಬಲಿ ಹಿನ್ನೆಲೆ ನಿನ್ನೆ ನಡೆಯಬೇಕಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಕೂಡ ಮುಂದೂಡಿಕೆ ಮಾಡಲಾಗಿದೆ.













