ಬೀರೂರು: ಶ್ರೀಗಂಧ ಮರ ಕಳ್ಳತನ ಮಾಡಿದ ಆರೋಪಿ ಬಂಧನ

ಬೀರೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಕೇದಿಗೆರೆ ಗ್ರಾಮದ ಸ.ನಂ 37 ರ ಜಮೀನಿನಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕಡಿದು ಸಾಗಣೆ ಮಾಡಿದ್ದ ಆರೋಪದ ಮೇಲೆ ಬಿಲ್ಲಹಳ್ಳಿಯ ರಿಜ್ವಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

 

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ

ಗಿರಿಯಾಪುರ ಗ್ರಾಮದ ಹರಕುಮಾರ್ ತೋಟದಲ್ಲಿ ಬೆಳೆಸಿದ್ದ 12 ಶ್ರೀಗಂಧದ ಮರಗಳು ಕಳವಾಗಿದ್ದವು ಈ ಕುರಿತು ಪೊಲೀಸರಿಗೆ ದೂರು ದಾಖಲಾಗಿತ್ತು. ಬೀರೂರು ವೃತ್ತ ನಿರೀಕ್ಷಕ ಎಸ್.ಎನ್.ಶ್ರೀಕಾಂತ್ ಅವರ ನೇತೃತ್ವದಲ್ಲಿ ರಿಜ್ವಾನ್ ನನು ಬಂಧಿಸಿ 1.75 ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ

ಬೀರೂರು ವೃತ್ತ ನಿರೀಕ್ಷಕ ಎಸ್.ಎನ್.ಶ್ರೀಕಾಂತ್ ಅವರ ನೇತೃತ್ವದಲ್ಲಿ ಯಗಟಿ ಠಾಣೆಯ ಪಿ.ಎಸ್.ಐ ರಂಗನಾಥ್ ಎನ್, ಅಪರಾಧ ವಿಭಾಗದ ಹೆಡ್ ಕಾನ್ ಸ್ಟೇಬಲ್ ಮಹೇಶ್ವರಪ್ಪ, ಪ್ರದೀಪ್, ಕೆ.ಎಸ್.ಸಿದ್ದೇಶ್, ಶ್ರೀನಿವಾಸ್, ಕಿರಣ್‌ ಕುಮಾರ್ ಮತ್ತು ತಾಂತ್ರಿಕ ವಿಭಾಗದ ನಯಾಜ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಕೃತ್ಯದಲ್ಲಿ ಪಾಲ್ಗೊಂಡ ಇತರ ಆರೋಪಿಗಳ ಬಂಧನಕ್ಕೆ ಶೋಧ ಮುಂದುವರಿದಿದೆ.

 

ಚಿಕ್ಕಮಗಳೂರು: ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ | ಮುಖಂಡರ ನಡುವೆ ಹೊಡೆದಾಟ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ ಬಿಜೆಪಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ.

 

ಇದನ್ನೂ ಓದಿ; ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ

ಮೂಡಿಗೆರೆ ನೂತನ ಅಧ್ಯಕ್ಷರನ್ನಾಗಿ ಗಜೇಂದ್ರ ಅವರನ್ನು ನೇಮಕ ಮಾಡಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಆದೇಶ ಹೊರಡಿಸಿದ್ದು, ಇದರ ಬೆನ್ನಲ್ಲೇ ಇನ್ನುಳಿದ ಆಕಾಂಕ್ಷಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ 12 ಮಂದಿ ಆಕಾಂಕ್ಷಿಗಳಿದ್ದರು. ಈ ಪೈಕಿ ಗಜೇಂದ್ರ ಅವರನ್ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ರೊಚ್ಚಿಗೆದ್ದ ಇನ್ನೊಂದು ಗುಂಪು ಗಲಾಟೆ ಮಾಡಿದೆ. ಮೂಡಿಗೆರೆ ಪಟ್ಟಣದ ಬಿಜೆಪಿ ಕಚೇರಿಯ ಮುಂಭಾಗ ಹೊಡೆದಾಟ ನಡೆದಿದ್ದು, ಇದರಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ. ರತನ್ ಅವರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.