ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ತಮಟದಹಳ್ಳಿ ಗೇಟ್ ಬಳಿ ನಡೆದಿದೆ.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಶುಭ ಸಮಾರಂಭಕ್ಕಾಗಿ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ನ ಮುಂಭಾಗ ಜಖಂಗೊಂಡಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!












