ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ)ಲೋ ಬಿಪಿ ಹಾಗೂ ಹೃದಯಾಘಾತದಿಂದ ಇಂದು ಮದುವೆಯಾಗಬೇಕಿದ್ದ ಯುವತಿ ನಿನ್ನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಶೃತಿ ಮೃತ ದುರ್ದೈವಿ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಇಂದು ಸಪ್ತಪದಿ ತುಳಿದು ಹೊಸ ಬಾಳಿಗೆ ಕಾಲಿಡಲಿದ್ದಳು. ಮದುವೆ ಖುಷಿಯಲ್ಲಿದ್ದ ಶೃತಿಗೆ ಲೋ ಬಿಪಿ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಧು ಪ್ರಾಣ ಕಳೆದುಕೊಂಡಿದ್ದಾಳೆ.
ತರೀಕೆರೆ ಮೂಲದ ಯುವಕ ದಿಲೀಪ್ ಜೊತೆ ಮದುವೆ ನಿಶ್ಚಯವಾಗಿತ್ತು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂಭ್ರಮದಲ್ಲಿದ್ದ ಮದುವೆ ಮನೆ ದುಃಖದಲ್ಲಿ ಮುಳುಗಿದೆ. ಮಗಳನ್ನು ಕಳೆದುಕೊಂಡ ಪೋಷಕರು ಕಂಗಾಲಾಗಿದ್ದಾರೆ. ಅಲ್ಲದೇ ಮದುವೆ ಮೂಲಕ ಹೊಸ ಬದುಕಿನ ಕನಸು ಕಂಡಿದ್ದ ವರ ಆಘಾತಕ್ಕೆ ಒಳಗಾಗಿದ್ದಾನೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












