ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಮೂಳೆ ತಜ್ಞ ವೆಂಕಟೇಶ್ ಮೇಲೆ ಮಹಿಳೆ ಏಕಾಏಕಿ ಹಲ್ಲೆ ನಡೆಸಿದ್ದು, ಶರ್ಟ್, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿದ್ದಾರೆ.
ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ

ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೋರ್ವ ಆಸ್ಪತ್ರೆಗೆ ಬಂದಿದ್ದ. ಚಿಕಿತ್ಸೆ ನೀಡುವ ಸಮಯದಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾಳೆ.
ರೋಗಿಯ ಅಕ್ಕನಿಗೆ ವೈದ್ಯರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ; 10th, 12th ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್; ಈ ಷರತ್ತು ಕಡ್ಡಾಯ
ಘಟನೆಯ ಬಳಿಕ ರಕ್ಷಣೆ ನೀಡುವಂತೆ ಆಗ್ರಹಿಸಿ ಆಸ್ಪತ್ರೆ ಸಿಬ್ಬಂದಿ ಒಪಿಡಿ ಸೇವೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ನ್ಯಾಯ ಕೊಡಿಸುವಂತೆ ಆಸ್ಪತ್ರೆ ಸಿಬ್ಬಂದಿ ಆಗ್ರಹಿಸಿದ್ದಾರೆ.
ವೈದ್ಯರ ಮೇಲೆ ಹಲ್ಲೆ ಪ್ರಕರಣ ಹಲ್ಲೆಕೋರರನ್ನ ಬಂಧಿಸುವಂತೆ ಆಗ್ರಹ:
ಇನ್ನು ವೈದ್ಯರ ಮೇಲೆ ಹಲ್ಲೆಯನ್ನು ಖಂಡಿಸಿ ನಗರ ಠಾಣೆ ಮುಂದೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಜಮಾಯಿಸಿ ಹಲ್ಲೆಕೋರರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಆಟೋ ಚಾಲಕರ ಸಂಘ, ಕರವೇ, ಬಜರಂಗದಳ ಸೇರಿ ವಿವಿಧ ಸಂಘನೆಗಳು ಬೆಂಬಲ ಸೂಚಿಸಿದ್ದಾರೆ.
ಮಾರ್ಕೆಟ್ ರಸ್ತೆಯಲ್ಲಿರೋ ನಗರ ಠಾಣೆ ಮುಂಭಾಗ 100 ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಘೋಷಣೆ ಕೂಗುತ್ತಿದ್ದು, ಸ್ಥಳದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್, ಡಿಸ್ಟ್ರಿಕ್ಟ್ ಸರ್ಜನ್ ಕೂಡ ಭಾಗಿಯಾಗಿದ್ದಾರೆ.












