ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮನೆಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ; ದೀಪಾವಳಿ ಸಂಭ್ರಮದಲ್ಲಿರುವ ಆಭರಣ ಪ್ರಿಯರನ್ನು ಕಾಡಲಿದೆ ಬೇಸರ; ಚಿನ್ನದ ಬೆಲೆಯಲ್ಲಿಂದು ದುಪ್ಪಟ್ಟು ಏರಿಕೆ, ಬೆಳ್ಳಿ ಇಳಿಕೆ

ನಗರದ ಕಲ್ಯಾಣ ನಗರದಲ್ಲಿ ನಡೆದ ಮನೆಕಳ್ಳತನ ಪ್ರಕರಣದಲ್ಲಿ ಪಿ.ಐ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪೊಲೀಸ್ ತಂಡದ ನೇತೃತ್ವದಲ್ಲಿ, ಕಳ್ಳತನವಾದ 48 ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಕಳುವಾಗಿದ್ದ 2.5 ಲಕ್ಷ ಮೌಲ್ಯದ ಚಿನ್ನಾಭರಣಗಳು ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ 15 ಲಕ್ಷ ಬೆಲೆಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1899 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಈ ಕಾರ್ಯಚಾರಣೆಯಲ್ಲಿ ಪಿ.ಐ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ರೇಣುಕಾ ಪ್ರಸಾದ್ ಎಸ್, ಪಿ.ಎಸ್.ಐ ಕೆ. ಎಸ್. ಸತೀಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ನಂಜಪ್ಪ, ನವೀನ್, ಪ್ರದೀಪ್ ಮತ್ತು ದಿನೇಶ್ ರವರು ಇದ್ದರು.
ಕಡೂರು: ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಲ್ಲಿ ಶಿಕ್ಷಣ ಇಲಾಖೆ ತಲೆತಗ್ಗಿಸುವ ಘನಘೋರ ಘಟನೆ ಬೆಳಕಿಗೆ ಬಂದಿದೆ. ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಡೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಿಬ್ಬಂದಿ ಚಂದನ, ಆಕೆಯ ಪ್ರಿಯಕರ ವಿನಯ್ ಬಂಧಿತ ಆರೋಪಿಗಳು. ವಿನಯ್ ಎಂಬಾತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.
ಅಮಲು ಬರೆಸಿ ದೌರ್ಜನ್ಯ:
ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್ ಎಂಬಾತ ಮೊದಲಿಗೆ ಪ್ಯಾರಾ ಮೆಡಿಕಲ್ ಕೋರ್ಸ್ ಕೊಡಿಸುತ್ತೇನೆ ಎಂದು ವಿದ್ಯಾರ್ಥಿನಿಯರನ್ನು ಪುಸಲಾಯಿಸುತ್ತಿದ್ದ. ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಇದಕ್ಕೆ ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನು ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನು ಅಲ್ಲೇ ಉಳಿಸಿಕೊಳ್ಳುತ್ತಿದ್ದಳು. ಕಾಫಿ, ಟೀಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆಪ್ರಜ್ಞಾವಸ್ಥೆಯಲ್ಲಿರುತ್ತಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ಮೂವರು ಆರೋಪಿಗಳ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.












