ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಲ್ಲಿ ವಿಜಯಪುರ ಬಡಾವಣೆಯ ಸುಧಾ ಎಂಬುವವರ ಮನೆ ಮೇಲೆ ನಡೆಸಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಯಾಸಿನ್ ಸೇರಿ ಆರು ಜನರನ್ನು ಬಂಧಿಸಲಾಗಿದೆ.
ಇದನ್ನೂ ಓದಿ; ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು

ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಪ್ರಾಪ್ತರು ಸೇರಿ ಆರು ಮಂದಿ ಬಂಧಿಸಿದ್ದಾರೆ. ಮೊಹಮದ್ ಮತೀನ್, ಅಯಾನ್, ಮುನ್ನಾವರ್ ಪಾಷಾ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕ್ಷದ್ ಹುಸೇನ್ ಬಂಧಿತರು. ರಾತ್ರಿ ಚಿಕ್ಕಮಗಳೂರಿನ ನ್ಯಾಯಾಲಯದ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಲಾಗಿದೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಪೊಲೀಸರು ಆರು ಆರೋಪಿಗಳನ್ನು ಹಾಜರುಪಡಿಸಿದ್ದು, ಉಳಿದ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ನಾಲ್ವರು ಅಪ್ರಾಪ್ತರನ್ನು ಹಾಸನದ ರಿಮ್ಯಾಂಡ್ ಹೋಂಗೆ ಶಿಫ್ಟ್ ಮಾಡಲಾಗಿದೆ.












