ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಆಸ್ಪತ್ರೆಯ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಕರ್ತವ್ಯ ನಿರತ ವೈದ್ಯ ಡಾಕ್ಟರ್ ವೆಂಕಟೇಶ್ ಮೇಲೆ ತಸ್ಲೀಮ್ ಚಪ್ಪಲಿಯಿಂದ ಥಳಿಸಿ ಕೊರಳು ಪಟ್ಟಿ ಹಿಡಿದು ಎಳೆದಾಡುವ ಮೂಲಕ ದೌರ್ಜನ್ಯ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಪ್ರಕರಣ ಸಂಬಂಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ವೈದ್ಯ -ಸಿಬ್ಬಂದಿ ಮುಷ್ಕರ ನಡೆಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದೂರನ್ನು ನೀಡಿದ್ದರು. ಪ್ರಕರಣದ ತೀವ್ರತೆ ಹಾಗೂ ಸಾರ್ವಜನಿಕ ವಲಯದಿಂದ ಬಂದ ಒತ್ತಡದ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಚರಣೆ ನಡೆಸಿದ ಪೊಲೀಸರು ಆರೋಪಿಗಳಾದ ತಸ್ಲಿಮ ಹಾಗೂ ಇರ್ಫಾನ್ ರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗಳೀಬ್ಬರನ್ನು ಇದೇ ತಿಂಗಳ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.












