ಚಿಕ್ಕಮಗಳೂರು: ಬಾಬಾಬುಡನ್ ದರ್ಗಾ ಶಾಖಾದ್ರಿ ಗೌಸ್ ಮೋಯಿದ್ದೀನ್ ಗೆ ಬಂಧನ ಭೀತಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು: ಬಾಬಾಬುಡನ್ ದರ್ಗಾ ಶಾಖಾದ್ರಿ ಗೌಸ್ ಮೋಯಿದ್ದೀನ್ ಗೆ ಬಂಧನ ಭೀತಿ ಎದುರಾಗಿದೆ.

 

ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಸೈಯದ್ ಗೌತ್ ಮೊಹಿದ್ದೀನ್ ವಿರುದ್ಧ ಅಕ್ರಮವಾಗಿ ಹುಲಿ ಚರ್ಮವನ್ನ ಮನೆಯಲ್ಲಿ ಇಟ್ಟುಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಶಾಖಾದ್ರಿ ವಿರುದ್ಧ ಗಂಭೀರ ಆರೋಪ ಮಾಡಿದೆ.

 

ದಿನದಿಂದ ದಿನಕ್ಕೆ ಹುಲಿ ಉಗುರು, ಚರ್ಮ ವಿಚಾರ ಬೆಳಕಿಗೆ ಬರುತ್ತಿದ್ದಂತೆ ದತ್ತಪೀಠದ ಶಾಖಾದ್ರಿಯೂ ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೊ ವೈರಲ್ ಆಗಿತ್ತು. ಈ ಹಿನ್ನೆಲೆ ಶಾಖಾದ್ರಿ ಅವರ ಮನೆಗೆ ಇಂದು ಆರ್.ಎಫ್.ಓ ಮೋಹನ್ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಶಾಖಾದ್ರಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಶಾಖಾದ್ರಿ ಮನೆಗೆ ಬೀಗ ಹಾಕಿಕೊಂಡು ರಾಯಚೂರಿನ ಕಾರ್ಯಕ್ರಮಕ್ಕೆ ತೆರಳಿದ್ದು ಶಾಖಾದ್ರಿಯವರ ಅಣ್ಣನ ಮಗನಿಗೆ ನೋಟಿಸ್ ನೀಡಿದೆ. ಇಂದು ಸಂಜೆ ಒಳಗೆ ಚಿಕ್ಕಮಗಳೂರಿನ ನಿವಾಸಕ್ಕೆ ಹಾಜರಾಗಲು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಚಿಕ್ಕಮಗಳೂರಿನ ಎಂ.ಜಿ ರಸ್ತೆ ಬಳಿ ಇರುವ ನಿವಾಸದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನ ನಿಯೋಜನೆ ಮಾಡಿದ್ದು ಸಂಜೆ ಒಳಗೆ ಮನೆಯ ಬೀಗ ತೆರದು ತನಿಖೆಗೆ ಸಹಕಾರ ನೀಡದೆ ಇದ್ದರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಶಾಖಾದ್ರಿ ಕುಟುಂಬದವರ ಸಮ್ಮುಖದಲ್ಲಿ ಮನೆಯ ಬೀಗವನ್ನ ತೆರೆದು ತನಿಖೆ ನಡೆಸಲು ಸಿದ್ದತೆ ನಡೆಸಿದ್ದು. ಮನೆ ಪರಿಶೀಲನೆಗೆ ಸರ್ಚ್ ವಾರೆಂಟನ್ನು ಪಡೆದುಕೊಂಡಿದ್ದಾರೆ.

 

ಹುಲಿ ಉಗುರು ಹೊಂದಿದ್ದ ಆರೋಪ: ಎನ್ ಆರ್ ಪುರದಲ್ಲಿ DRFO ದರ್ಶನ್ ಅರೆಸ್ಟ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ಅದರಲ್ಲಿ ಕಳಸದ ಅರಣ್ಯಾಧಿಕಾರಿಯೊಬ್ಬ ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.

 

ಡಿ.ಆರ್.ಎಫ್.ಓ ದರ್ಶನ್ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿದ್ದು, ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ ಸೂಚಿಸಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪದ ಡಿ.ಎಫ್.ಓ ನಂದೀಶ್ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.

ಏನಿದು ಪ್ರಕರಣ:
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಅರಣ್ಯ ರಕ್ಷಕರು, ವನ್ಯಜೀವಿ ರಕ್ಷಕರು ಎಂದು ಹೇಳಿಕೊಳ್ಳುವ ಅರಣ್ಯ ಅಧಿಕಾರಿಯೊಬ್ಬ ಹುಲಿ ಉಗುರಿನ ಡಾಲರ್  ಧರಿಸಿದ ಆರೋಪ ಕೇಳಿಬಂದಿತ್ತು. ಹುಲಿ ಉಗುರು ಧರಿಸಿದ ಆರೋಪದ ಹಿನ್ನಲೆ ಕಳಸದ ಡಿಆರ್‌ಎಫ್‌ಓ ದರ್ಶನ್ ಎಂಬಾತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿತ್ತು. ದರ್ಶನ್ ಹುಲಿಯ ಉಗುರಿನ ಡಾಲರ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶೋಕಿ ಮಾಡಿದ್ದ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ದರ್ಶನ್ ಫೋಟೋ ಡಿಲಿಟ್ ಕೂಡ ಮಾಡಿದ್ದ.

ಕಾನೂನು ಎಲ್ಲರಿಗೂ ಒಂದೇ ಸಂತೋಷ್, ಮಾರ್ಕಂಡೇಯ ದೇವಸ್ಥಾನದ ಅರ್ಚಕರು ಸೇರಿದಂತೆ ಅಮಾಯಕರ ಮೇಲೆ ಕ್ರಮ ಕೈಗೊಳ್ಳುವ ಅರಣ್ಯ ಇಲಾಖೆಯವರು ಆರ್‌ಎಫ್‌ಒ ದರ್ಶನ್ ಮೇಲೆಯೂ ಕ್ರಮ ತೆಗೆದುಕೊಳ್ಳಬೇಕು ಎಂದು ದೂರುದಾರ ಸುಪ್ರೀತ್ ಈ ಬಗ್ಗೆ ತಿಳಿಸಿದ್ದ ಬೆನ್ನಲ್ಲೆ ನಿನ್ನೆ ನ್ಯೂಸ್ ಮಲ್ನಾಡ್ ವರದಿ ಕೂಡ ಮಾಡಿತ್ತು ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.