ಎನ್. ಆರ್. ಪುರ: ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರ ಮೃತದೇಹ ಪತ್ತೆ

ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರು ಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಅದೀಲ್, ಸಾಜೀದ್ ಹಾಗೂ ಅಫ್ಲಾಖಾನ್ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ರಾಜ್ಯದ ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ!; ಅರ್ಜಿ ಸಲ್ಲಿಸುವುದು ಹೇಗೆ..? ಅರ್ಹತೆ ಏನು?


ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರಲ್ಲಿ ಮೂವರು ಸ್ನೇಹಿತರು ತೆಪ್ಪದಲ್ಲಿ ತೆರಳಿದ್ದಾರೆ. ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ. ತೆಪ್ಪದಲ್ಲಿ ತೆರಳಿದ ಕೆಲವೇ ಹೊತ್ತಿನಲ್ಲಿ ತೆಪ್ಪ ಮುಳುಗಿ ಮೂವರು ನೀರು ಪಾಲಾಗಿದ್ದರು.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್; ನೂತನ ಕೇಂದ್ರ ಸಚಿವರಿಂದ ಬಂಪರ್ ಘೋಷಣೆ


ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತ ಮೂವರು ನೀರು ಪಾಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಕತ್ತಲಾದರೂ ಮೂವರ ದೇಹಗಳು ಪತ್ತೆಯಾಗಲಿಲ್ಲ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿ ಗುರುವಾರ (ಇಂದು) ಮತ್ತೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಹೊರ ತೆಗೆದಿದ್ದು, ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಆಲ್ದೂರು: ಕೃಷಿ ಹೊಂಡದ ನೀರಲ್ಲಿ ಮುಳುಗಿ ಬಾಲಕ ಮೃತ್ಯು

ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಕೃಷಿ ಹೊಂಡದಲ್ಲಿ ಶೇಖರಣೆಗೊಂಡಿದ್ದ ನೀರಿನಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ನಡೆದಿದೆ.

ಮೃತರನ್ನು ಪೂರ್ಣೇಶ್ (16) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಈತ ಶಾಲೆಗೆ ರಜೆ ಇದ್ದ ಕಾರಣ ಊರಿಗೆ ಆಗಮಿಸಿದ್ದ.

ಕೃಷಿ ಹೊಂಡದ ಆಳದ ಅರಿವಿಲ್ಲದ ಪೂರ್ಣೇಶ್ ಈಜಲು ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.