ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್


ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಭೂಕುಸಿತ ಸಹ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೂ ಜಿಲ್ಲಾ ಪ್ರವಾಸವನ್ನು ಕೈಗೊಳ್ಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರವಹಿಸುವಂತೆ ಜನರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳಿ, ಕೆರೆಕಟ್ಟೆಗಳಿಗೆ ತೆರಳದಂತೆ, ಮಳೆಯಿಂದ ಧರೆ, ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಒಂದು ವಾರ ಸ್ಥಗಿತಗೊಳಿಸುವಂತೆ ಸೂಚಿಸಿದೆ.


ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ


ಜಿಲ್ಲೆಯಲ್ಲಿರುವ ಪ್ರವಾಸಿತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದು ವಾರ ಕಾಲ ಮುಂದೂಡುವಂತೆ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿದ್ದಾರೆ.


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.