ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆರೆಯಲ್ಲಿ ಈಜಲು ಹೋದ ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಸೈಂಟ್ ಜೋಸೆಫ್ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ಹರ್ಷ (19) ಮೃತ ದುರ್ದೈವಿ.

 

ಇದನ್ನೂ ಓದಿ; ಕರ್ನಾಟಕದ ಕೆಲವು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಯನಗರದ ನಿವಾಸಿ ಕೃಷ್ಣಪ್ಪ ಎಂಬುವವರ ಪುತ್ರ. ಕೃಷ್ಣಪ್ಪ ಅವರು ನಗರದ ಖಾಸಗಿ ಬ್ಯಾಂಕ್ ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

 

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-17.10.2023

ಮಂಗಳವಾರ ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ ಎಂದು ಮನೆಯಿಂದ ಹೋಗಿದ್ದಾನೆ. ಆದರೆ ತರಗತಿಗೆ ಹೋಗದೇ ಸ್ನೇಹಿತನೊಂದಿಗೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದಾನೆ. ನೀರಿಗಿಳಿದ ಹರ್ಷ ಈಜಲು ಆಗದೇ ಕೆರೆಯಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಆತನೊಂದಿಗೆ ಇದ್ದ ಸ್ನೇಹಿತ ಗಾಬರಿಗೊಂಡು ಊರಿನವರಿಗೆ ವಿಷಯ ಮುಟ್ಟಿಸಿದ್ದಾನೆ. ಕೆರೆಯ ನೀರು ತುಂಬಾ ಆಳವಾಗಿದ್ದರಿಂದ ಸ್ಥಳೀಯರು ನೀರಿಗಿಳಿಯಲು ಹಿಂದೇಟು ಹಾಕಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯ ಮುಳುಗುತಜ್ಞರ ಸಹಕಾರದಿಂದ ಕೆರೆಯಲ್ಲಿ ಮುಳುಗಿದ್ದ ಹರ್ಷನ ಮೃತದೇಹವನ್ನು ಮೇಲೆತ್ತಿದ್ದಾರೆ.

 

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 17.10.2023

ಹರ್ಷ ತನ್ನ ಪೋಷಕರಿಗೆ ಒಬ್ಬನೇ ಮಗನೆಂದು ತಿಳಿದುಬಂದಿದೆ. ಇದ್ದೊಬ್ಬ ಮಗನನ್ನು ಕಳೆದುಕೊಂಡ ಪೋಷಕರ ಮತ್ತು ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ.

 

ಚಿಕ್ಕಮಗಳೂರು: ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.

ಮೂಡಿಗೆರೆಯ ಗಂಗನ ಮಕ್ಕಿಯ ಪೆಟ್ರೋಲ್ ಬಂಕ್ ಸಮೀಪ ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಶವ ಮೂಡಿಗೆರೆ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.

ಇನ್ನು ಈತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.