ಚಿಕ್ಕಮಗಳೂರು: ಕಾಂಗ್ರೆಸ್‌ ಶಾಸಕ ದತ್ತಮಾಲೆ ಧರಿಸಿದ ಸಂಬಂಧ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಿಂದ ಸ್ಪಷ್ಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ ಅವರು ದತ್ತ ಜಯಂತಿಗೆ ಸಂಬಂಧಿಸಿದ ದತ್ತಮಾಲೆ ಧರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಪ್ರಸಾರವಾಗಿತ್ತು. ಆದರೆ ಎಚ್.ಡಿ ತಮ್ಮಯ್ಯ ದತ್ತಮಾಲೆ ಹಾಕಿದ್ದಾರೆ ಎಂಬುದು ಸುಳ್ಳು ಸುದ್ದಿಯಾಗಿದ್ದು, ದುರುದ್ದೇಶದಿಂದ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್ ಮೂರ್ತಿ ಸ್ಪಷ್ಟನೆ ನೀಡಿದ್ದಾರೆ.

 

ಇದನ್ನೂ ಓದಿ; ಗ್ರಾಹಕರೇ ಗಮನಿಸಿ; ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ;ಇಲ್ಲಾಂದ್ರೆ ಹೊಸ ವರ್ಷದಿಂದ ಸಬ್ಸಿಡಿ ಆಸೆ ಬಿಡಿ!

ಚಪ್ಪಲಿ ಹಾಕದೆ ಓಡಾಡುತ್ತಿರುವ ಶಾಸಕರು:
ಹೌದು, ದತ್ತಜಯಂತಿಗೆ ಕಾಂಗ್ರೆಸ್ ಶಾಸಕ ಹೆಚ್.ಡಿ. ತಮ್ಮಯ್ಯ ಸಾಥ್ ನೀಡಿದ್ದಾರೆ. ಕೊರಳಲ್ಲಿ ಮಣಿಗಳನ್ನು ಹೊಂದಿದ ದತ್ತಮಾಲೆ ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ಜಿಲ್ಲೆಗೆ ಆಗಮಿಸಿದ್ದ ವೇಳೆ ಬರಿಗಾಲಲ್ಲಿ ಶಾಸಕ ತಮಯ್ಯ ಓಡಾಡುತ್ತಿದ್ದರು. ದತ್ತಮಾಲೆ ಹಾಕಿದ ಭಕ್ತರು ವ್ರತ ಆಚರಣೆಯ ಅವಧಿಯಲ್ಲಿ ಕಾಲಿಗೆ ಚಪ್ಪಲಿ ಹಾಕುವಂತಿಲ್ಲ. ವ್ರತ ಪೂರ್ಣಗೊಳ್ಳುವವರೆಗೂ ಬರಿಗಾಲಲ್ಲಿ ಓಡಾಡಬೇಕು. ಆದ್ದರಿಂದ ಶಾಸಕ ತಮ್ಮಯ್ಯ ಕೂಡ ದತ್ತಮಾಲೆ ಹಾಕಿ ಕೇಸರಿ ಶಲ್ಯ ಹಾಕದೆ ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂಬ ಸುದ್ದಿಯಾಗಿತ್ತು.

ಇದನ್ನೂ ಓದಿ; ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ

ದತ್ತಮಾಲೆ ಅಲ್ಲ ಎಂದು ಸ್ಪಷ್ಟನೆ:
ಅದು ದತ್ತಮಾಲೆ ಅಲ್ಲ ಸುಬ್ರಹ್ಮಣ್ಯ ಸ್ವಾಮಿ ದೇವರ ಷಷ್ಠಿ ಹಿನ್ನೆಲೆಯಲ್ಲಿ ಬರಿಗಾಲಿನಲ್ಲಿ ನಡೆದಾಡುತ್ತಿರುವುದನ್ನು ತಪ್ಪಾಗಿ ಅರ್ಥೈಸಲಾಗಿದೆ. ಕೇವಲ ವದಂತಿ ಅಷ್ಟೇ ಎಂದು ಎಂ.ಎಲ್.ಮೂರ್ತಿ ತಿಳಿಸಿದರು.

 

ಇದನ್ನೂ ಓದಿ; ಸಂಗೀತ ಶೃಂಗೇರಿ ಹುಟ್ಟಿದ್ದೆಲ್ಲಿ? ಆಕೆಗೆ ಶೃಂಗೇರಿಗೂ ಇರೋ ನಂಟೇನು?; ನಿಮ್ಮೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ!

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ತಮ್ಮಯ್ಯ, ಎಲ್ಲದಕ್ಕೂ ಉತ್ತರ ನೀಡುತ್ತೇನೆ ನಮ್ಮ ನಾಯಕರೇ ಮಾತನಾಡಿದ ಮೇಲೆ ನಾನು ಸದ್ಯ ಏನು ಹೇಳುವುದಿಲ್ಲ ಎಂದು ಶಾಸಕ ತಮ್ಮಯ್ಯ ತಿಳಿಸಿದರು.

 

ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಭಾರೀ ದುರಂತ, ಮಣ್ಣಿನಡಿಯಲ್ಲಿ ಸಿಲುಕಿದ ಕಾರ್ಮಿಕರು

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಿನ್ನಲೆ ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ನಾಲ್ವರು ಕಾರ್ಮಿಕರ ಮೇಲೆ ಮಣ್ಣು ಕುಸಿದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ.

ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಈ ಅವಘಡ ನಡೆದಿದೆ. ಜೆಸಿಬಿ ಯಂತ್ರ ಬಳಸಿದಾಗ ರಸ್ತೆಯ ತಡೆಗೋಡೆ ಸಮೀಪ ನಾಲ್ವರು ಕಾರ್ಮಿಕರು ಕೆಲಸ ಮಾಡುವಾಗ ಎಕಾಏಕಿ ಮಣ್ಣು ಕುಸಿದಿದೆ. ತಕ್ಷಣವೇ ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಿದ್ದು, ಸ್ವಲ್ವ ಸಮಯದ ವೇಳೆ ಮತ್ತೊಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಸತತ ಒಂದು ಗಂಟೆ ಕಾಲ ಮೂರು ಜೆಸಿಬಿ ಮೂಲಕ ಕಾರ್ಯಾಚಾರಣೆ ಮಾಡಲಾಗಿತ್ತು. ಆದರೆ ಒಂದೂವರೆ ಗಂಟೆಗಳ ಕಾಲ ಮಣ್ಣಿನಡಿಯಲ್ಲಿ ಸಿಲುಕಿದ ಕಾರಣ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು  ರಾಜ್ ಕಮಲ್ ಗುತ್ತಿಗೆ ಕಂಪೆನಿಗೆ ಸೇರಿದ ಜೆಸಿಬಿ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಆಂಬುಲೆನ್ಸ್ ಹಾಗೂ ಶೃಂಗೇರಿ ಪೊಲೀಸರು ಭೇಟಿ ನೀಡಿ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.