ವಕ್ಫ್ ಎಂಬ ಆಧುನಿಕ ಭಸ್ಮಾಸುರನನ್ನು ನಾಶ ಮಾಡಲು ಹಿಂದೂಗಳೆಲ್ಲರೂ ಒಂದಾಗಬೇಕು: ಸಿ.ಟಿ ರವಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಕ್ಫ್ ಬೋರ್ಡ್ ಅನ್ನೋದು ಆಧುನಿಕ ಭಸ್ಮಾಸುರ. ವೋಟಿನ ಆಸೆಗೆ ಅವರಿಗೆ ನಮ್ಮವರೇ ವರ ಕೊಟ್ಟರು ಎಂದು ಸಿ.ಟಿ.ರವಿ ಕಿಡಿಕಾರಿದ್ದಾರೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಚಿಕ್ಕಮಗಳೂರಿನಲ್ಲಿ ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ವಿರುದ್ಧ ಮಾತನಾಡಿದ ಅವರು, ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜವೇ ಒಂದಾಗಬೇಕು. ಹಿಂದಿನ ಭಸ್ಮಾಸುರನಂತೆ ಇಂದಿನ ಭಸ್ಮಾಸುರ ಎಲ್ಲರ ತಲೆ ಮೇಲೆ ಕೈ ಇಡಲು ಬಂದಿದ್ದಾನೆ. ಭಗವಂತ ಮತ್ತೊಮ್ಮೆ ಮೋಹಿನಿ ರೂಪದಲ್ಲಿ ಭಸ್ಮಾಸುರನನ್ನ ನಾಶ ಮಾಡಬೇಕಾದ ಅವಶ್ಯಕತೆ ಇದೆ.

ಆ ಭಸ್ಮಾಸುರ ವರ ಕೊಟ್ಟ ಶಿವನನ್ನೇ ಅಟ್ಟಿಸಿಕೊಂಡು ಹೋದನಂತೆ. ಆಗ ವಿಷ್ಣು ಮೋಹಿನಿ ರೂಪ ತಾಳಿ ಭಸ್ಮಾಸುರನನ್ನ ನಾಶ ಮಾಡಿದ ಕಥೆ ಕೇಳಿದ್ದೇವೆ. ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜವೇ ಒಂದಾಗಬೇಕು.


ಇದನ್ನೂ ಓದಿ; ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್‌ ಶಿಪ್‌; ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ವಕ್ಫ್ ಬೋರ್ಡಿಗೆ ಪರಮಾಧಿಕಾರವಿದೆ, ದೇಶ-ಜಗತ್ತಿನ ಯಾವ ಆಸ್ತಿಯನ್ನಾದರೂ ನಮ್ಮದು ಅನ್ನಬಹುದು. ಒಮ್ಮೆ ಘೋಷಣೆ ಮಾಡಿಕೊಂಡರೆ ಅಲ್ಲಾಗೆ ಸೇರಿದ್ದು ಅಂತಾರೆ. ಬಲಿ ಚಕ್ರವರ್ತಿ ವಿಷ್ಣುವಿನ ಅವತಾರದ ವಾಮನನಿಗೆ ಆ ಕಾಲದಲ್ಲೇ ದಾನ ಕೊಟ್ಟಿದ್ದಾನೆ. ಮತ್ತೆ ದಾನ ಕೊಡಬೇಕು ಅಂದರೆ ವಿಷ್ಣುವಿನ ಅವತಾರದ ವಾಮನನೇ ಬಂದು ಕೊಡಬೇಕು.

ಇಡೀ ಭೂಮಂಡಲವೇ ಮಹಾ ವಿಷ್ಣುಗೆ ಸೇರಿದ್ದು. ಮಹಾವಿಷ್ಣು ಎಲ್ಲಿವರೆಗೆ ಇನ್ನೊಬ್ಬರಿಗೆ ಭೂಮಿ ಕೊಡಲ್ವೋ ಅಲ್ಲಿವರೆಗೂ ಅದು ಸನಾತನ ಧರ್ಮೀಯರದ್ದು. ಸನಾತನ ಧರ್ಮದಿಂದ ದೂರ ಹೋದವರಿಗೆ ಭೂಮಿ ಮೇಲೆ ಬದುಕುವ ಹಕ್ಕಿದೆ ಅಷ್ಟೆ. ದಶಾವತಾರ, ದೇವನೊಬ್ಬ ನಾಮ ಹಲವು, ಬಹುದೇವತಾರಾಧನೆ ಬಗ್ಗೆ ನಂಬಿಕೆ ಇಟ್ಟಿದ್ದಾರೋ ಅವರಿಗೆ ಮಾತ್ರ ವಾರಸುದಾರಿಕೆ ಇದೆ ಎಂದು ಸಿ. ಟಿ. ರವಿ ಹೇಳಿದರು.


ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ; ಏನದು? ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.