ಚಿಕ್ಕಮಗಳೂರು: ದತ್ತಮಾಲ ಅಭಿಯಾನ | ಎಲ್ಲೆಡೆ ಬಿಗಿ ಬಂದೋಬಸ್ತ್

 

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಶ್ರೀರಾಮ ಸೇನೆ ನಡೆಸುತ್ತಿರುವ ದತ್ತಮಾಲಾ ಅಭಿಯಾನದ ಭಾಗವಾಗಿ ಭಾನುವಾರ ಶೋಭಾಯಾತ್ರೆ ನಡೆಯಲಿದ್ದು, ಭದ್ರತೆ ಸೇರಿ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

 

ಇದನ್ನೂ ಓದಿ; ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?

ಜಿಲ್ಲಾಡಳಿತದಿಂದ ಭದ್ರತೆ:
ಅಭಿಯಾನದ ಅಂತಿಮ ದಿನವಾದ ಭಾನುವಾರ ನಗರದ ಶಂಕರಮಠದಿಂದ ಎಂ.ಜಿ.ರಸ್ತೆ ಮೂಲಕ ಅಜಾದ್ ಪಾರ್ಕ್ ತನಕ ಶೋಭಾಯಾತ್ರೆ ನಡೆಯಲಿದೆ. ಬಳಿಕ ಮಾಲಾಧಾರಿಗಲು ಚಂದ್ರದ್ರೋಣ ಪರ್ವತ ಏರಿ ಇನಾಂ ದತ್ತಾತ್ರೇಯ ಪೀಠ (ಐ.ಡಿ. ಪೀಠ) ವ್ಯಾಪ್ತಿಯಲ್ಲಿ ಸತ್ಯ ದತ್ತವ್ರತ ಮತ್ತು ದತ್ತ ಹೋಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಊಹಿಸಿದೆ. ಸೂಕ್ತ ಭದ್ರತೆ ಒದಗಿಸಲು ತಯಾರಿ ನಡೆಸಿದೆ.

 

ಇದನ್ನೂ ಓದಿ; ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?

ಒಂದೂವರೆ ಸಾವಿರ ಪೊಲೀಸರ ನಿಯೋಜನೆ:
ದತ್ತಮಾಲ ಅಭಿಯಾನಕ್ಕೆ ಭದ್ರತೆ ಒದಗಿಸಲು ಹೊರ ಜಿಲ್ಲೆಯ ಒಂದೂವರೆ ಸಾವಿರ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 6 ಡಿವೈಎಸ್‌ಪಿ, 20 ಇನ್‌ಸ್ಪೆಕ್ಟರ್‌ಗಳು, 89 ಸಬ್ ಇನ್ ಸ್ಪೆಕ್ಟರ್, 141 ಎ.ಎಸ್.ಐಗಳು, 956 ಹೆಡ್ ಕಾನ್ ಸ್ಟೆಬಲ್ ಮತ್ತು ಕಾನ್ ಸ್ಟೆಬಲ್ ಗಳು, 250 ಗೃಹ ರಕ್ಷಕ ಸಿಬ್ಬಂದಿ, 8 ಕೆಎಸ್‌ಆರ್‌ಪಿ ತುಕಡಿ ಮತ್ತು 12 ಸಶಸ್ತ್ರ ಮೀಸಲುಪಡೆ ತಕಡಿ ನಿಯೋಜಿಸಲಾಗಿದೆ. 80 ಸೆಕ್ಷನ್ ಪಾಯಿಂಟ್ ಗಳನ್ನು ಗುರುತಿಸಲಾಗಿದೆ. ಪಾಯಿಂಟ್ ಗಳ ಸೂಕ್ಷ್ಮತೆ ಆಧರಿಸಿ ಅಲ್ಲಿಗೆ ಎಷ್ಟು ಸಿಬ್ಬಂದಿ ನಿಯೋಜಿಸಬೇಕು ಎಂಬುದನ್ನು ತೀರ್ಮಾನಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

 

ಇದನ್ನೂ ಓದಿ; ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

ಜಿಲ್ಲೆಯಲ್ಲಿ 26 ಚೆಕ್‌ಪೋಸ್ಟ್:
ಜಿಲ್ಲೆಯ ಗಡಿಭಾಗ ನಗರ ಮತ್ತು ಗಿರಿಭಾಗ ಸೇರಿ ಒಟ್ಟು 26 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಜಿಲ್ಲೆಯಾದ್ಯಂತ 49 ಸೆಕ್ಟರ್ ಮ್ಯಾಜಿಸ್ಟ್ರೇಟ್ ಗಳನ್ನು ನೇಮಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಹೊರ ಜಿಲ್ಲೆಗಳಿಂದ ಬರುವ ವಾಹನಗಳ ತಪಾಸಣೆಗೆ ಗಡಿಯಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ಇನ್ನೆರಡು ದಿನ ಜಿಲ್ಲೆಗೆ ಬರುವ ವಾಹನಗಳ ಮೇಲೆ ಪೊಲೀಸರು ನಿಗಾ ಇಡಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

 

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 03.11.2023

ಮೂರು ದಿನ ಪ್ರವಾಸ ನಿರ್ಬಂಧ:
ದತ್ತಮಾಲಾ ಅಭಿಯಾನದ ಅಂಗವಾಗಿ ನ.೪ರಿಂದ (ಶನಿವಾರ) ನ.6ರ ಬೆಳಿಗ್ಗೆ 10 ಗಂಟೆ ತನಕ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿ ಐ.ಡಿ ಪೀಠ ಮಾಣಿಕ್ಯಧಾರಾ ಜಲಪಾತ ಗಾಳಿಕೆರೆ ಪ್ರವಾಸಿತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಶ್ರೀರಾಮ ಸೇನೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ದಟ್ಟಣೆ ಉಂಟಾಗುವ ಕಾರಣಕ್ಕೆ ಬೇರೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು: ಲಂಚಬಾಕ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಂಗನಾಥಸ್ವಾಮಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಅಸ್ರಾರ್ ಅಹಮದ್ ಲಂಚಕ್ಕೆ ಬೇಡಿಕೆ ಇಟ್ಟ ಕಾರಣ ಕಾಂಟ್ರ್ಯಾಕ್ಟರ್ ಓರ್ವರ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಣ ಇಲಾಖೆ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ, ಶಾಲಾ ಶೌಚಾಲಯ ನಿರ್ಮಾಣ ಯೋಜನೆ ಅಡಿ ಶೌಚಾಲಯ ನಿರ್ಮಾಣ ಮಾಡಲು ಡಿಡಿಪಿಐ, ರಂಗನಾಥಸ್ವಾಮಿ, ಮತ್ತು ಅವರ ಕಛೇರಿ ಸಿಬ್ಬಂದಿ ಅಸ್ರಾರ್ ಅಹಮ್ಮದ್ 2% ರಂತೆ 10,000/- ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಲೋಕಾಯಕ್ತ ಪೊಲೀಸ್ ಠಾಣೆಗೆ ನೀಡಿದ ಲಿಖಿತ ದೂರಿನ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ರಂಗನಾಥಸ್ವಾಮಿ ಮತ್ತು ಅವರ ಕಛೇರಿಯ ಸಿಬ್ಬಂದಿ ಅಸ್ರಾರ್ ಅಹಮ್ಮದ್, ದ್ವಿತಿಯ ದರ್ಜೆ ಸಹಾಯಕರು ಈ ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ಲಂಚ ಪಡೆಯುವ ವೇಳೆ ಬಂಧಿಸಿದ್ದಾರೆ.

ಈ ದಾಳಿಯಲ್ಲಿ ಡಿವೈಎಸ್ಪಿ ಜೆಜೆ ತಿರುಮಲೇಶ್ , ಇನ್ಸ್ಪೆಕ್ಟರ್ಗಳಾದ ಮಲ್ಲಿಕಾರ್ಜುನ್, ಅನಿಲ್ ರಾಥೋಡ್, ಸಿಬ್ಬಂದಿ ಲೋಕೇಶ್, ವೇದಾವತಿ, ವಿಜಯ ಭಾಸ್ಕರ್, ಸಲ್ಮಾ ಬೇಗಮ್, ಅನಿಲ್ ನಾಯಕ್, ಪ್ರಸಾದ್ ,ರವಿ, ಮುಜೀಬ್ ಪಾಲ್ಗೊಂಡಿದ್ದರು

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.