ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಅಧ್ಯಕ್ಷರಾಗಿ ಸಿ.ಟಿ.ರವಿ ಆಯ್ಕೆಯಾಗಿದ್ದರೆ. ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ನೇಮಕಗೊಂಡಿದ್ದಾರೆ. 13 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡರೆ, ಜೆಡಿಎಸ್ 2 ಸ್ಥಾನಗಲಲ್ಲಿ ಗೆಲುವು ದಾಖಲಿಸಿದೆ. ಕಾಂಗ್ರೇಸ್ಗೆ ಈ ಚುನಾವಣೆಯಲ್ಲಿ ಒಂದು ಸ್ಥಾನವೂ ಲಭಿಸದೆ ನೆಲಕಚ್ಚಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಬಿಜೆಪಿಯಿಂದ ಸಿ.ಟಿ.ರವಿ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಹಾಗೂ ಡಿ.ಎಸ್.ಸುರೇಶ್ ನೇಮಕಗೋಂಡಿದ್ದು, ಜೆಡಿಎಸ್ ನಿಂದ ಎಸ್.ಎಲ್.ಭೋಜೇಗೌಡ, ದಿ.ಮಾಜಿ ಶಾಸಕ ಧರ್ಮೇಗೌಡ ಪುತ್ರ ಸೋನಾಲ್ ಆಯ್ಕೆಯಾಗಿದ್ದಾರೆ. ಐದು ಕಾಂಗ್ರೆಸ್ ಶಾಸಕರು, 3 ನಿಗಮ ಮಂಡಳಿ ಅಧ್ಯಕ್ಷರಿದ್ದರೂ ಸಹ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿರುವುದು ಕಾಂಗ್ರೆಸ್ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.
ಚುನಾವಣೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಕಡೂರಿನ , ಕೆ.ಎಸ್.ಆನಂದ್ ಭಾರೀ ಸೋಲು ಎದುರಾಗಿದ್ದು, ಕೊಪ್ಪದ ಬಿಜೆಪಿ ಮುಖಂಡ ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಪರಾಭವಗೊಂಡಿದ್ದಾರೆ.ಸಾರ್ವಜನಿಕರು-ಕಾರ್ಯಕರ್ತರು,ಹಾಗೂ ಬ್ಯಾಂಕ್ ಸಿಬ್ಬಂದಿಗಳು ಸಿ.ಟಿ.ರವಿಗೆ ಅಭಿನಂದನೆ ಸಲ್ಲಿಸುತ್ತಿದ್ದು, ಚಿಕ್ಕಮಗಳೂರು ನಗರದ ಡಿಸಿಸಿ ಬ್ಯಾಂಕ್ ಎದುರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.












