ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಿವಿಯ ಶಸ್ತ್ರ ಚಿಕಿತ್ಸೆಗೆ ಬಂದಿದ್ದ ಮಹಿಳೆಗೆ ವೈದ್ಯರು ಅನಸ್ತೇಷಿಯಾ ಕೊಡುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಭಾಗ್ಯ (33) ಮೃತ ಮಹಿಳೆ.
ಇದನ್ನೂ ಓದಿ: ರಾಜ್ಯದಲ್ಲಿ ಜಾತಿಗಣತಿಯಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಸಿಹಿಸುದ್ದಿ; ಗೌರವಧನ ಬಿಡುಗಡೆ

ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, ಚಿಕ್ಕಮಗಳೂರು ನಗರದ ಮೂಡಿಗೆರೆ ಮಾರ್ಗದ ಅನ್ನಪೂರ್ಣ ಖಾಸಗಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: 5 ಕೆಜಿಯ ದಿನಸಿಯ ಇಂದಿರಾ ಕಿಟ್ ವಿತರಣೆ!
ಮಂತ್ರಾಲಯದಿಂದ ಬಂದು ಕಳೆದ ಹತ್ತು ವರ್ಷಗಳಿಂದ ಚಿಕ್ಕಮಗಳೂರು ನಗರದ ಹಿರೇಮಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಭಾಗ್ಯ, ಕಿವಿ ಸಂಬಂಧಿತ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಿವಿ ಶಸ್ತ್ರ ಚಿಕಿತ್ಸೆಗೂ ಮುನ್ನ ವೈದ್ಯರು ಭಾಗ್ಯ ಅವರಿಗೆ ಅನಸ್ತೇಷಿಯಾ ನೀಡಿದ್ದಾರೆ. ಈ ವೇಳೆ ಹೃದಯಾಘಾತದಿಂದ ಭಾಗ್ಯ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ, ವೈದ್ಯರ ನಿರ್ಲಕ್ಷ್ಯದಿಂದಲೇ ಭಾಗ್ಯ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇದನ್ನೂ ಓದಿ: 10th ಪಾಸಾಗಿದ್ರೆ ಭಾರತೀಯ ಸೇನೆಯಲ್ಲಿ ಜಾಬ್












