ಚಿಕ್ಕಮಗಳೂರು: ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ವಂಚನೆ; ಪ್ರಕರಣ ದಾಖಲು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 1,10,250 ರೂ ಹಣ ಪಡೆದು ವಂಚಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದ್ದು, ಈ ಬಗ್ಗೆ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್; ಏನದು? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್


ಚಿಕ್ಕಮಗಳೂರಿನ ಅವಿನಾಶ್ ಮೋಸ ಹೋದ ವ್ಯಕ್ತಿ. ಮೇ.14 ರಂದು ಅವಿನಾಶ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ dhani finance pvt.ltd ನಲ್ಲಿ online personal loan ಅನ್ನು ಕಡಿಮೆ ಬಡ್ಡಿದರದಲ್ಲಿ ನೀಡುವುದಾಗಿ ನಂಬಿಸಿ ವಿವಿಧ ಶುಲ್ಕ(charges) ಎಂದು ಹಂತ ಹಂತವಾಗಿ ಆನ್ ಲೈನ್ ಮುಖಾಂತರ 1,10, 250 ರೂ ಗಳನ್ನು ವರ್ಗಾವಣೆ ಮಾಡಿ ವಂಚಿಸಿದ್ದಾರೆ. ವಂಚಿಸಿದ ವ್ಯಕ್ತಿಗಳನ್ನು ಪತ್ತೆ ಮಾಡಿ, ಅವರುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ವಾಹನ ಸವಾರರಿಗೆ ಕಾದಿದೆ ಸಂಕಷ್ಟ; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಜಯಪುರ: ವಿದ್ಯುತ್ ತಂತಿಗೆ ಅಲ್ಯುಮಿನಿಯಮ್ ಏಣಿ ತಾಗಿ ಶಾಕ್; ಕೃಷಿಕ ಸಾವು

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಹಲಸಿನ ಹಣ್ಣು ಕುಯ್ಯಲು ತೆರಳುತ್ತಿರುವ ವೇಳೆ ವಿದ್ಯುತ್ ಶಾಕ್ ಹೊಡೆದು ಕೃಷಿಕರೊಬ್ಬರು ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ


ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೇತೋಟದ ವಿಜಯಗೌಡ (56) ವಿದ್ಯುತ್ ಶಾಕ್ ನಿಂದಾಗಿ ಮೃತಪಟ್ಟ ಕೃಷಿಕ. ಹಲಸಿನ ಹಣ್ಣು ಕುಯ್ಯಲು ತೆರಳುತ್ತಿದ್ದಾಗ ಅಲ್ಯುಮಿನಿಯಂ ಎಣಿ ವಿದ್ಯುತ್ ವೈರ್ ಗೆ ತಗಲಿದ ಪರಿಣಾಮ ಸ್ಥಳದಲ್ಲಿಯೇ ವಿಜಯ್ ಸಾವನ್ನಪ್ಪಿದ್ದಾರೆ. ವಿದ್ಯುತ್ ಶಾಕ್ ಹೊಡೆದ ಪರಿಣಾಮ ದೇಹದ ಬಹುತೇಕ ಭಾಗಗಳು ಬೆಂಕಿಯಲ್ಲಿ ಸುಟ್ಟು ಹೋಗಿತ್ತು. ಹೊಗೆಯನ್ನು ಗಮನಿಸಿದ ಸ್ಥಳೀಯರೊಬ್ಬರು ಮೆಸ್ಕಾಂ ಸಿಬ್ಬಂಧಿಗೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; Hsrp Number Plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ


ಘಟನೆಯ ಕುರಿತು ಮೃತರ ಪತ್ನಿ ಪ್ರಮೀಳ ಜಯಪುರ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ಅಂಬರೀಶ್ ತನಿಖೆ ಪ್ರಾರಂಭಿಸಿದ್ದಾರೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ;  ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ ಇಲ್ಲಿದೆ;  ಮಿಸ್ ಮಾಡ್ದೆ ಈ ಸುದ್ದಿ ಓದಿ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.