ಚಿಕ್ಕಮಗಳೂರು: ಸರ್ಫೇಸಿ ಕಾಯ್ದೆಯಿಂದ ಕಾಫಿ ಉದ್ಯಮ ಹೊರಗಿಡಲು ಆಗ್ರಹ

 

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಫೇಸಿ ಕಾಯ್ದೆ ವ್ಯಾಪ್ತಿಯಿಂದ ಕಾಫಿ ಉದ್ಯಮವನ್ನು ಹೊರಗಿಡುವಂತೆ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಒತ್ತಾಯಿಸಿದೆ. ಈ ಕಾಯ್ದೆಯಿಂದ NPA ಆದವರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಕೆಪಿಎ 65ನೇ ವಾರ್ಷಿಕ ಮಹಾಸಭೆಯ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಕೆಪಿಎ ಅಧ್ಯಕ್ಷ ಮಹೇಶ್ ಶಶಿಧರ್ ಹೇಳಿದರು.

 

ಇದನ್ನೂ ಓದಿ; ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ ನಲ್ಲಿದೆ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಆನೆ ಕಾರಿಡಾರ್ ಸೇರಿದಂತೆ ಶಾಶ್ವತ ಪರಿಹಾರಕ್ಕೆ ಒತ್ತಾಯ:
ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು ಹಾಗೂ ರೈಲ್ವೆ ಹಳಿ ಅಳವಡಿಕೆ, ಆನೆ ಕಾರಿಡಾರ್ ಸ್ಥಾಪನೆ ಸೇರಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

 

ಇದನ್ನೂ ಓದಿ; ದೀಪಾವಳಿ ಹಬ್ಬದಂದು ಆರು ದಿನ ಬ್ಯಾಂಕುಗಳ ರಜೆ; ನಿಮ್ಮ ಪ್ರದೇಶದಲ್ಲಿ ಯಾವ್ಯಾವತ್ತು ಇದೆ ಇಲ್ಲಿದೆ ನೋಡಿ

7 ಗಂಟೆ ನಿರಂತರ ವಿದ್ಯುತ್ ಸರಬರಾಜು:
ನಿರಂತರವಾಗಿ 7 ಫೇಸ್ ಕರೆಂಟ್ ಅನ್ನು ಒದಗಿಸಬೇಕೆಂದು ಆಗ್ರಹಿಸಿದರು. ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಕಾಫಿ ಉದ್ಯಮವನ್ನು ಸೇರಿಸಬೇಕೆಂದು ಒತ್ತಾಯಿಸಿದರು. ಒತ್ತುವರಿ ಭೂಮಿ ಗುತ್ತಿಗೆ ಕೊಡುವ ಬಗ್ಗೆ ಈ ಹಿಂದಿನ ಸರ್ಕಾರ ಭರವಸೆ ನೀಡಿದ್ದು, ಈಗ ಇರುವ ಸರ್ಕಾರ ಅದನ್ನು ಜಾರಿಗೆ ತರಬೇಕು ಎಂದು ಹೇಳಿದರು. 10 ಎಚ್.ಪಿ ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯೂ ಈಡೇರಿಲ್ಲ ಎಂದ ಅವರು ಈ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಬೇಕೆಂದರು. ಕಾಫಿ ಉದ್ಯಮ ಬೆಲೆ ಏರಿಳಿಕೆ, ಹವಾಮಾನ ವೈಪರಿತ್ಯ, ಅನೇಕ ರೋಗ, ಕಾರ್ಮಿಕರ ಸಮಸ್ಯೆಯಿಂದ ಸಂಕಷ್ಟಕ್ಕೆ ಈಡಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕಾಫಿ ಮಂಡಳಿ ಈ ನಿಟ್ಟಿನಲ್ಲಿ ಗಮನ ನೀಡಬೇಕೆಂದು ಹೇಳಿದರು.

 

ಕಾವೇರಿ 2.0 ತಂತ್ರಾಂಶ ಸರಿಪಡಿಸುವಿಕೆ:
ಕಾವೇರಿ 2.0 ತಂತ್ರಾಂಶ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದರಿಂದ ಅನೇಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಭೂಮಿ ಮತ್ತು ಕಾವೇರಿ ತಂತ್ರಾಂಶದ ನಡುವೆ ಸಮನ್ವಯತೆ ಕೊರತೆ ಇರುವುದರಿಂದ ಪಕ್ಕಾ ದಾಖಲೆಗಳನ್ನು ಪಡೆಯಲು ಕಷ್ಟವಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಎ ಉಪಾಧ್ಯಕ್ಷ ಕೆ .ಜಿ. ರಾಜೀವ್, ಕಾಫಿ ಕಮಿಟಿ ಅಧ್ಯಕ್ಷ ಅಜಯ್ ತಿಪ್ಪಯ್ಯ, ಉಪಾಸೀ ಅಧ್ಯಕ್ಷ ಶ್ರೀಧರನ್, ಕಾರ್ಯದರ್ಶಿ ಆರ್, ಸಂಜಿತ್ ಉಪಸ್ಥಿತರಿದ್ದರು.

 

ಅರಣ್ಯ-ಕಂದಾಯ ಭೂಮಿ ಸಮಸ್ಯೆ ನಿವಾರಣೆಗೆ ಜಂಟಿ ಸರ್ವೆ ಪರಿಹಾರ- ಸಚಿವ ಈಶ್ವರ ಖಂಡ್ರೆ

ಬೆಂಗಳೂರು:  (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ, ಪರಿಭಾವಿತ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಜಿಲ್ಲೆಯ ಶಾಸಕರುಗಳೊಂದಿಗೆ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದ ಅವರು, ಪರಿಭಾವಿತ (ಡೀಮ್ಡ್) ಅರಣ್ಯದ ವಿಚಾರದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ. 3.3 ಲಕ್ಷಕ್ಕೂ ಹೆಚ್ಚು ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಅಂತಿಮಗೊಳಿಸಲಾಗಿದೆ. ಇದರಲ್ಲೂ ಕೆಲವು ಪಟ್ಟಾ ಭೂಮಿ ಇದೆ, ಶಾಲೆ ಇದೆ ಎಂದು ಹೇಳಲಾಗುತ್ತಿದ್ದು, ಈಗ ಪ್ರತಿ ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸರ್ವೆ ಮಾಡಿಸಿದಲ್ಲಿ ಎಲ್ಲ ಮಾಹಿತಿಯನ್ನೂ ಕ್ರೋಡೀಕರಿಸಿ ಮತ್ತೊಮ್ಮೆ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಬಹುದು. ಆಗ ಮಾತ್ರ ಈ ಸಮಸ್ಯೆ ಪರಿಹರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಡೀಮ್ಡ್ 1 ಎಂದು ಘೋಷಿಸಲಾಗಿದ್ದನ್ನು ಈಗಾಗಲೇ ಕೈಬಿಡಲಾಗಿದೆ. ಡೀಮ್ಡ್ 2 ಎಂದು ಘೋಷಿಸಿರುವುದು ಅಂತಿಮವಾಗಿದ್ದು, ಇದರಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಪ್ರಯತ್ನಿಸಲಾಗುವುದು, ಜಂಟಿ ಸಮೀಕ್ಷೆ ಪೂರ್ಣವಾಗುವವರೆಗೆ 4(1) ಪ್ರಕ್ರಿಯೆ ನಡೆಸದಂತೆ ಸೂಚಿಸುವುದಾಗಿ ಚಿಕ್ಕಮಗಳೂರು ಭಾಗದ ಶಾಸಕರುಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಕಾಡಾನೆ ಸಮಸ್ಯೆಗೂ ಪರಿಹಾರ:
ಮಳೆ ಕೊರತೆಯಿಂದ ಕಾಡಾನೆಗಳ ಹಾವಳಿಯೂ ಹೆಚ್ಚಳವಾಗುತ್ತಿದ್ದು, ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಇದಕ್ಕೆ ಸೂಕ್ತ ಪರಿಹಾರ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಇಲಾಖೆಗೆ ಸೂಚಿಸಲಾಗಿದೆ ಎಂದರು. ಚಿಕ್ಕಮಗಳೂರು ಭಾಗದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಪುಂಡಾನೆಯನ್ನು ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಮಾತನಾಡಿ, ಒಂದು ವಾರದೊಳಗೆ ಪರಿಭಾವಿತ ಅರಣ್ಯ, ಮೀಸಲು ಅರಣ್ಯದ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಲಾಗುವುದು. ಈಗ ಅತ್ಯಾಧುನಿಕ ಡ್ರೋನ್ ನಂತಹ ಸಲಕರಣೆ ಇದ್ದು, ಜಂಟಿ ಸರ್ವೆಯನ್ನು ಮಾಡಲು ಸಹಕರಿಸಲಾಗುವುದು ಎಂದು ತಿಳಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.