ಚಿಕ್ಕಮಗಳೂರು: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಪೆಬ್ರುವರಿ 10 ರಿಂದ 18 ವರೆಗೆ ನಡೆಯಲಿದ್ದು, 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲು ಅಹತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯದರ್ಶಿ ನಿರ್ವಾಣಾಧಿಕಾರಿ ಎಚ್. ಎಸ್. ಕೀರ್ತನಾ ತಿಳಿಸಿದ್ದಾರೆ.
ಸೋಮವಾರ ನಡೆದ ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಅಭಿಯಾನದ ಪ್ರಯುಕ್ತ ಅಂತರ ಇಲಾಖೆಯ ಸವನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಂತುಹುಳು ಕಾರ್ಯಕ್ರವದ ಚಟುವಟಿಕೆಗಳನ್ನು 2015-16 ನೇ ಸಾಲಿನಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಕಾರ್ಯಕ್ರಮದ ಮಾರ್ಗಸೂಚಿಯಂತೆ ವರ್ಷದಲ್ಲಿ 2 ಬಾರಿ ಪೆಬ್ರುವರಿ ಮತ್ತು ಆಗಸ್ಟ್ ತಿಂಗಳಿನಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದರು.
ರಾಜ್ಯಾದಂತ 1 ರಿಂದ 19 ನೇ ವರ್ಷದ ಎಲ್ಲಾ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ಶಾಲಾ ಮತ್ತು ಕಾಲೇಜಿನಲ್ಲಿ ವಿತರಿಸಲಾಗುತ್ತಿದೆ. ತರಬೇತಿ ಹೊಂದಿದ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲ್ವಿಚಾರಣೆ ಮಾತ್ರೆ ನೀಡಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ 1 ರಿಂದ 19 ವರ್ಷದೊಳಗಿನ ಮಕ್ಕಳ ಪಟ್ಟಿ ಪಡೆಯಲಾಗಿದ್ದು, ಅದರಂತೆ 2.23 ಲಕ್ಷ ಮಕ್ಕಳಿದ್ದು ರಾಜ್ಯ ಮಟ್ಟದಿಂದ 2.80 ಲಕ್ಷ ಮಾತ್ರೆಗಳು ಬಂದಿದ್ದು ಸಂಸ್ಥೆವಾರು ಔಷಧಿಯನ್ನ ವಿತರಣೆ ಮಾಡಲಾಗಿದೆ ಎಂದರು.
ಈ ಕಾರ್ಯಕ್ರಮಕ್ಕಾಗಿ ಆರೋಗ್ಯ ಮತ್ತು ಕುಟುಂಬ ಇಲಾಖೆಯೊಂದಿಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆ, ಹಿಂದುಳಿದ ಅಭಿವೃದ್ದಿ ಇಲಾಖೆ ಮತ್ತು ಪದವಿ ಪೂರ್ವ ಶಕ್ಷಣ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದಿದ್ದಾರೆ.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಚ್.ಕೆ ಮಂಜುನಾಥ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮಯ್ಯ ಭಾಗವಹಿಸಿದ್ದರು.












