ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ಎಲ್ಲೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಜಲಕ್ಷಾಮದಿಂದ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ; ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್; LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

ಮಾರ್ಗಸೂಚಿಯಲ್ಲಿ ಏನಿದೆ?:
ಜಲ ಮೂಲಗಳಿಂದ ಕೃಷಿಗೆ ನೀರನ್ನು ಉಪಯೋಗಿಸದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಕೆರೆ, ಹಳ್ಳ, ಬಾವಿಗಳಿಂದ ಕೃಷಿಗೆ ನೀರನ್ನು ಬಳಸದಂತೆ ಎಚ್ಚರಿಕೆ ನೀಡಿದೆ. ಪಂಪ್ ಸೆಟ್ ಗಳಿಂದಲೂ ಕೃಷಿ ಚಟುವಟಿಕೆಗಳಿಗೆ ನೀರು ಬಳಸುವಂತಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ; RDPR ಇಲಾಖೆಯಿಂದ ಉದ್ಯೋಗ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ; ಓಂಬುಡ್ಸ್ ಪರ್ಸನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನೀರಿನ ಸಮಸ್ಯೆಗೆ ಸಹಾಯವಾಣಿ ಆರಂಭ:
ಕುಡಿಯುವ ನೀರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ನೀರಿನ ಸಮಸ್ಯೆ ಇದ್ದರೆ 08262-228181 ಸಂಖ್ಯೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕರೆ ಮಾಡಬಹುದು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತಿಳಿಸಿದೆ.
ಇನ್ನು ನೀರಿನ ಟ್ಯಾಂಕರ್ ಮಾಲೀಕರಿಗೆ ಮಾರ್ಚ್ 11 ರೊಳಗಾಗಿ ನೋಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೂಡಿಗೆರೆ: KSRTC ಬಸ್ ನಲ್ಲಿ ಬ್ರೇಕ್ ಫೇಲ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬ್ರೆಕ್ ಫೈಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಇದನ್ನೂ ಓದಿ; ಮಹಿಳೆಯರಿಗೆ 15,000 ಸಿಗುವ ಮತ್ತೊಂದು ಬಂಪರ್ ಯೋಜನೆ!; ಇಲ್ಲಿದೆ ಮಾಹಿತಿ
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಚಾರ್ಮಾಡಿ ಘಾಟ್ ನಲ್ಲಿ ಬ್ರೆಕ್ ಫೈಲ್ ಆಗಿದೆ. ತಕ್ಷಣವೇ ಎಚ್ಚೆತ್ತ ಬಸ್ ಚಾಲಕ ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ 70 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ; ಕೊನೆಗೂ ಅಂತ್ಯ ಕಂಡ ಶೃಂಗೇರಿಯ ಪೋಕ್ಸೋ ಪ್ರಕರಣ; ಬಾಲಕಿಯ ತಾಯಿ ಹಾಗೂ ಮೂವರು ಕಾಮಾಂಧರು ಫಿಕ್ಸ್ : 49 ಆರೋಪಿಗಳಿಗೆ ರಿಲೀಫ್
ಇನ್ನು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಂತೋಷ್ ಅವರ ಸಮಯ ಪ್ರ












