ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸದಾಗಿ ಡಾಟಾ ಎಂಟ್ರಿ ಆಪರೇಟರ್ ಅನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಜಿಲ್ಲಾ ಮಟ್ಟದ ಸಭೆಯನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ; ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!; ಯಾವುದೆಲ್ಲಾ ವಸತಿ ಶಾಲೆ, ಎಲ್ಲಿ ಅರ್ಜಿ ಸಲ್ಲಿಸಬೇಕು?

ಚಿಕ್ಕಮಗಳೂರು ಹಾಗೂ ಕಡೂರು ತಾಲೂಕುಗಳಲ್ಲಿ 107 ಗ್ರಾಮ ಪಂಚಾಯಿತಿ ಒಳಗೊಂಡತೆ ದಿನಾಂಕ 08.12.2023 ಪೂರ್ವಾಹ್ನ 11 ಗಂಟೆಗೆ, ಹಾಗೂ ಮೂಡಿಗೆರೆ, ಕಳಸ, ಅಜ್ಜಂಪುರ, ತರೀಕೆರೆ, ನ.ರಾ. ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ 119 ಗ್ರಾಮ ಪಂಚಾಯಿತಿ ಒಳಗೊಂಡತೆ ದಿನಾಂಕ 08.12.2023 ಅಪರಾಹ್ನ 2.30 ಕ್ಕೆ ಚಿಕ್ಕಮಗಳೂರು ನಗರದ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣ ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
ಜಯಪುರ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಸೀದಿ ಜಮಾತ್ ಸದಸ್ಯ ಹನೀಫ್ | ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಮಸೀದಿ ಸದಸ್ಯತ್ವದಿಂದ ಕಿಕ್ಕೌಟ್
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮುಸ್ಲಿಂ ಸಮುದಾಯವೇ ತಲೆ ತಗ್ಗಿಸುವಂತೆ ಮಾಡಿದ್ದು, ಜಯಪುರ ಬದ್ರಿಯಾ ಜುಮ್ಮಾ ಮಸೀದಿಯ ಜಮಾತ್ ನಿಂದ ಸದಸ್ಯತ್ವ ರದ್ದುಗೊಳಿಸಿ ಬಹಿಷ್ಕರಿಸಲು ಮಸೀದಿಯ ಸಮಿತಿ ವತಿಯಿಂದ ನಿರ್ಧರಿಸಲಾಗಿದೆ ಎಂದು ಮಸೀದಿ ಸಮಿತಿಯ ಸಹ ಕಾರ್ಯದರ್ಶಿ ಹುಮಾಯೂನ್ ಕಬೀರ್ ಹೇಳಿದರು.
ಏನಿದು ಘಟನೆ:
ಅಂಗಡಿಗೆ ವಸ್ತುಕೊಳ್ಳಲು ಬಂದ ಅಪ್ರಾಪ್ತ ಬಾಲಕಿಗೆ ಆರೋಪಿ ಹನೀಫ್ ಲೈಂಗಿಕ ಕಿರುಕುಳ ನೀಡಿದ್ದು , ಈ ಕುರಿತು ಬಾಲಕಿ ಪೋಷಕರಿಗೆ ತಿಳಿಸಿದ್ದಳು. ಸಂತ್ರಸ್ಥ ಬಾಲಕಿಯ ಪೋಷಕರು ಆರೋಪಿಯ ವಿರುದ್ದ ಜಯಪುರ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಜಯಪುರ ಪೊಲೀಸ್ ಠಾಣೆಯ ಪಿಎಸ್ ಐ ಅಂಬರೀಶ್ ಆರೋಪಿಯನ್ನು ಬಂಧಿಸಿ, ಪೋಕ್ಸೋ ಹಾಗೂ ಐಪಿಸಿ 354 ಖಾಯ್ದೆ ಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ಬುಧವಾರ ಜಯಪುರದ ಬದ್ರಿಯಾ ಜುಮ್ಮಾ ಮಸೀದಿಯ ಜಮಾತ್ ಸಹ ಕಾರ್ಯದರ್ಶಿ ಹುಮಾಯೂನ್ ಕಬೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಘಟನೆಯನ್ನು ಜಮಾತ್ ಖಂಡಿಸುತ್ತದೆ. ಜಮಾತ್ ನಿಂದ ಆರೋಪಿಯ ಸದಸ್ಯತ್ವ ರದ್ದುಪಡಿಸಲಾಗಿದೆ. ಇನ್ನು ಮುಂದೆ ಆ ವ್ಯಕ್ತಿಗೂ ಜಮಾತ್ ಗೂ ಯಾವುದೇ ಸಂಬಂಧ ಇಲ್ಲ ಎಂದರು.
ಈ ಸಂದರ್ಭದಲ್ಲಿ ಜಯಪುರ ಬದ್ರಿಯಾ ಜುಮ್ಮಾ ಮಸೀದಿ ಸಮಿತಿಯ ಅಧ್ಯಕ್ಷ ಅಬೂಬಕರ್, ಉಪಾಧ್ಯಕ್ಷ ನಾಸಿರ್ ಹುಸೇನ್, ಕಾರ್ಯದರ್ಶಿ ಖಾದರ್ ಕೆ, ಖಜಾಂಚಿ ಎಂ ಕೆ ಮಹಮ್ಮದ್, ಪತ್ರಿಕಾ ವಿತರಕರಾದ ಅಬ್ದುಲ್ ಲತೀಫ್, ಯುವ ಮುಖಂಡರುಗಳಾದ ರಶೀದ್, ಇಸ್ಮಾಯಿಲ್ ಮಕ್ಕಿಕೊಪ್ಪ, ಮುಸ್ತಾಫಾ, ಮಾಜಿ ಕಾರ್ಯದರ್ಶಿ ಮಹಮ್ಮದ್ ಇದ್ದರು.













