ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ದಿನದಿಂದ ದಿನಕ್ಕೆ ಪ್ರವಾಸಿಗರ ಮೋಜುಮಸ್ತಿ ಹೆಚ್ಚಾಗುತ್ತಿದ್ದು, ಹಚ್ಚ ಹಸಿರಿನಿಂದ ಕಂಗೊಳಿಸುವ ಪರಿಸರವನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಇದಕ್ಕೆ ಸ್ಥಳೀಯ ಜೀಪ್ ಚಾಲಕ ಸಾರಥ್ಯ ವಹಿಸಿದ್ದಾನೆ.
ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ

ಪ್ರವಾಸಿಗರಿಗೆ ಎಣ್ಣೆ ಪಾರ್ಟಿಗೆ ಸ್ಥಳ ಮೀಸಲಿಟ್ಟ ಖಾಸಗಿ ಜೀಪ್ ಚಾಲಕ, ತನ್ನ ಜೀಪ್ ಮೂಲಕ ಕರೆತಂದು ಎಣ್ಣೆ ಪಾರ್ಟಿ ಮಾಡಿಸಿದ್ದಾನೆ. ಇದನ್ನು ವಿಡಿಯೋ ರೆಕಾರ್ಡ್ ಮಾಡಿದ ಪ್ರವಾಸಿಗರಿಗೆ ಜೀಪ್ ಚಾಲಕ ಧಮ್ಕಿ ಹಾಕಿದ್ದಾನೆ. ನಾನು ಅರಣ್ಯ ಇಲಾಖೆಯ ಸಿಬ್ಬಂದಿ ಒಂದು ವಿಡಿಯೋ ಮೊಬೈಲ್ ನಲ್ಲಿ ಇದ್ರೆ ಸರಿ ಇರಲ್ಲ ಎಂದು ಜೀಪ್ ಚಾಲಕ ಮಹೇಂದ್ರ ಅವಾಜ್ ಹಾಕಿದ್ದಾನೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ
ಜೀಪ್ ಚಾಲಕನ ಈ ವಿಡಿಯೋವನ್ನು ಪ್ರವಾಸಿಗರೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಚಾಲಕ ಮಹೇಂದ್ರ ವಿರುದ್ಧ ಕ್ರಮಕ್ಕೆ ಸ್ಥಳೀಯ ಪರಿಸರ ಪ್ರೇಮಿಗಳ ಒತ್ತಾಯಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರವಾಸಿಗರ ಮೋಜುಮಸ್ತಿಗೆ ಇನ್ನಾದರೂ ಬ್ರೇಕ್ ಬೀಳುತ್ತಾ ಕಾದುನೋಡಬೇಕಿದೆ.
ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?












