ಕಡೂರು: ತುಂಡಾಗಿ ಬಿದ್ದ ವಿದ್ಯುತ್ ತಂತಿ: ಹೊತ್ತಿ ಉರಿದ ಮನೆ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮನೆ ಮೇಲೆ ತುಂಡಾಗಿ ವಿದ್ಯುತ್ ತಂತಿ ಬಿದ್ದ ಪರಿಣಾಮ ಮನೆಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ

ಮನೆಯವರು ತೋಟಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮಂಜಮ್ಮ, ಚಂದ್ರಪ್ಪ ಎಂಬುವರ ಮನೆ ಬೆಂಕಿಯಿಂದ ಸಂಪೂರ್ಣ ಹಾನಿಯಾಗಿ, ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ; ಸ್ವಂತ ಕೃಷಿ ಭೂಮಿ ಹೊಂದಿರೋ ರೈತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಸಿಗುತ್ತೆ 25,000 ಹಣ! ಈಗಲೇ ಅರ್ಜಿ ಸಲ್ಲಿಸಿ

ಸ್ಥಳಿಯರು ಹಾಗೂ ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸಿದ್ದು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಲ್ದೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 90 ಗ್ರಾಂ ಚಿನ್ನದ ಉಂಗುರಗಳು ಸೀಜ್

ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಲೋಕಸಭೆ ಚುನಾವಣೆಗೆ 2024 ದಿನಾಂಕ ಘೋಷಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತೆ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ. ಇಂದು ಆಲ್ದೂರಿನ ವಸ್ತಾರೆ ಜಂಕ್ಷನ್ ಬಳಿ ದಾಖಲೆ ಇಲ್ಲದೆ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ 90 ಗ್ರಾಂ ಮೌಲ್ಯದ 18 ಚಿನ್ನದ ಉಂಗುರಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ?; ಹೆಸರು ನೋಂದಣಿಗೆ ಅವಕಾಶ

ಚಿನ್ನದ ವ್ಯಾಪಾರಿ ಒಬ್ಬರು ಗಟ್ಟಿ ಖರೀದಿಸಿ ಅದರಿಂದ ಉಂಗುರಗಳನ್ನು ತಯಾರಿಸಿ ಉಡುಪಿಯ ಜ್ಯುವೆಲರಿ ಅಂಗಡಿ ಮಾಲೀಕರಿಗೆ ನೀಡಲು ತೆರಳುತ್ತಿದ್ದರು ಎನ್ನಲಾಗಿದ್ದು, ತಪಾಸಣೆ ನಡೆಸಿದ ಪೊಲೀಸರು ಚಿನ್ನದ ಉಂಗುರವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ;  ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ; ಎರಡು ತಿಂಗಳ ಹಣ ಬರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ!

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.