ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಕಳೆದ ನಾಲ್ಕು ದಿನಗಳ ಹಿಂದೆ ಕಾಡಾನೆ ದಾಳಿಗೆ ಕಾರ್ಮಿಕ ಯಲ್ಲಪ್ಪ ಸಾವನ್ನಪ್ಪಿದ ಘಟನೆ ಪುರ ಗ್ರಾಮದಲ್ಲಿ ನಡೆದಿತ್ತು. ಇದೀಗ ಕಾಡಾನೆ ಸೆರೆ ಹಿಡಿಯಲು ಐದು ಸಾಕಾನೆಗಳ ತಂಡವು ಚಿಕ್ಕಮಗಳೂರು ತಾಲ್ಲೂಕಿನ ಹುಣಸೇಹಳ್ಳಿ ಗ್ರಾಮಕ್ಕೆ ಆಗಮಿಸಿವೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಈ ಹಿಂದೆ ಕಾಡಾನೆ ದಾಳಿಗೆ ಹಲವಾರು ರೈತರು, ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ನಾಲ್ಕು ದಿನದ ಹಿಂದೆ ಕಾರ್ಮಿಕ ಯಲ್ಲಪ್ಪ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಬಾಳೆಹೊನ್ನೂರು ಅರಣ್ಯ ಇಲಾಖೆ ಮುಂದೆ ಕೂಡಲೇ ಕಾಡಾನೆಯನ್ನ ಸೆರೆ ಹಿಡಿಯುವಂತೆ ರೈತರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಬೀಡುಬಿಟ್ಟಿರುವ ಮೂರರಲ್ಲಿ ನರಹಂತಕ ಒಂದು ಕಾಡಾನೆಯನ್ನ ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿದ್ದು, ಶಿವಮೊಗ್ಗದ ಸಕ್ರೆಬೈಲಿನಿಂದ ಐದು ಸಾಕಾನೆಗಳ ತಂಡ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮಕ್ಕೆ ಆಗಮಿಸಿವೆ. ಉಳಿದ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಚಲನ-ವಲನ ಗಮನಿಸುವಂತೆ ಸೂಚಿಸಿಲಾಗಿದೆ.













