ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರದ ನಿರ್ಬಂಧದ ನಡುವೆಯೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ಎತ್ತಿನಭುಜದಲ್ಲಿ ಭಾನುವಾರ 200ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ. ಆದರೆ, ಸರ್ಕಾರದ ನಿಯಮ, ಅರಣ್ಯ ಸಚಿವರ ಆದೇಶಕ್ಕೆ ಬೆಲೆ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಸರ್ಕಾರದ ಮಟ್ಟದಲ್ಲಿ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಒಂದು ಕಾನೂನು ಮಾಡಿದರೆ ಅದನ್ನ ಸಂಪೂರ್ಣ ಗಾಳಿಗೆ ತೂರಿದ್ದಾರೆ.

ಚಿಕ್ಕಮಗಳೂರಿನ ಪ್ರಸಿದ್ದ ತಾಣವಾದ ಎತ್ತಿನಭುಜ ಚಾರಣಕ್ಕೆ ನಿಷೇಧವಿದ್ದರಿಂದ ಅರಣ್ಯ ಇಲಾಖೆ ಚಾರಣಕ್ಕೆ ತೆರಳುವ ಮಾರ್ಗಕ್ಕೆ ಮುಳ್ಳಿನ ಬೇಲಿ ಹಾಕಲಾಗಿತ್ತು,ಆದರೆ ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಂದ ಅಕ್ರಮ ಪ್ರವೇಶಿಸಿದ್ದಲ್ಲದೆ ಮಾರ್ಗದಲ್ಲಿ ಹಾಕಲಾಗಿದ್ದ ಬೇಲಿಯನ್ನು ಮುರಿಯಲಾಗಿದೆ. ಸದ್ಯ ಪ್ರವಾಸಿಗರು ಅಕ್ರಮವಾಗಿ ಚಾರಣಕ್ಕೆ ಪ್ರವೇಶಿಸಿರುವ ಫೋಟೋ, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಪ್ರವೇಶಿಸಿದ್ದರು ಕೂಡ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ವಿರುದ್ದ ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದು, ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ವಿದ್ಯುತ್ ಗ್ರಾಹಕರಿಗೆ ಬಿಗ್ ಶಾಕ್; ನಾಳೆಯಿಂದ ಈ ಹೊಸ ನಿಯಮ ಪಾಲಿಸದಿದ್ದರೆ ಕರೆಂಟ್ ಕಟ್…!












