ಚಿಕ್ಕಮಗಳೂರು: ಅತಿವೃಷ್ಠಿ ಹಣದಲ್ಲಿ ಅವ್ಯವಹಾರ: ಮಧ್ಯವರ್ತಿಗಳ ಬಂಧನಕ್ಕೆ ರೈತರ ಆಗ್ರಹ

ಕಡೂರು:  (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಚೌಳ ಹಿರಿಯೂರು ಕಂದಾಯ ವೃತ್ತದ ವ್ಯಾಪ್ತಿಯಲ್ಲಿ ಅತಿವೃಷ್ಟಿ ಪರಿಹಾರದ ಹಣದಲ್ಲಿ ಅವ್ಯವಹಾರ ಮಾಡಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿಯ ಮುಂದೆ ಕಲ್ಕೆರೆ ರೈತರು ಭಾನುವಾರವೂ ಪ್ರತಿಭಟನೆ ನಡೆಸಿದರು.

 

ಇದನ್ನೂ ಓದಿ; ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ

ಏನಿದು ಘಟನೆ:
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಡೂರು ತಾಲೂಕಿನ ಅಂತರಗಟ್ಟೆ ಹಾಗೂ ಕಲ್ಕೆರೆ ಕಂದಾಯ ವೃತ್ತ ವ್ಯಾಪ್ತಿಯ ಹಲವು ಗ್ರಾಮಗಳ ನೂರಾರು ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಣೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಹಾಗೂ ಸಿಬ್ಬಂದಿ ವಂಚನೆ ಮಾಡಿರುವ ಬಗ್ಗೆ ಸಂತ್ರಸ್ತ ರೈತರು ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತನಿಖಾಧಿಕಾರಿಗಳ ತಂಡವನ್ನು ನೇಮಿಸಿದ್ದರು ಈ ತನಿಖಾ ತಂಡ ಶನಿವಾರ ಜಿಲ್ಲಾಡಳಿತಕ್ಕೆ ತನಿಖೆಯ ಪ್ರಾಥಮಿಕ ವರದಿಯನ್ನು ಸಲ್ಲಿಸಿ ವರದಿಯಲ್ಲಿ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಪಾಲಾಕ್ಷಮೂರ್ತಿ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದರು.

ಇದನ್ನೂ ಓದಿ; ಟ್ಯಾಕ್ಸಿಗಳ ಕಳ್ಳಾಟಕ್ಕೆ ಬ್ರೇಕ್; ಸಾರಿಗೆ ಇಲಾಖೆಯಿಂದ ಏಕರೂಪ ದರ ಅಸ್ತ್ರ ಪ್ರಯೋಗ

ಪಾಲಾಕ್ಷಮೂರ್ತಿ ಅವರು ಮಧ್ಯವರ್ತಿಗಳೊಂದಿಗೆ ಶಾಮೀಲಾಗಿ ನೈಜ ಖಾತೆದಾರರ ಪಹಣಿ ಉಪಯೋಗಿಸಿ ಉದ್ದೇಶಪೂರ್ವಕವಾಗಿ 651 ಪ್ರಕರಣಗಳಲ್ಲಿ ಅನ್ಯವ್ಯಕ್ತಿಗಳಿಗೆ, ಮರಣ ಹೊಂದಿದವರ ಖಾತೆಗಳಿಗೂ ಬೆಳೆ ನಷ್ಟ ಪರಿಹಾರ ಹಣ ವರ್ಗಾವಣೆ ಮಾಡಿದ್ದಾರೆ. ಅಕ್ರಮವಾಗಿ ಸುಮಾರು 2.1 ಕೋಟಿ ಹಣವನ್ನು ಅನರ್ಹರ ಖಾತೆಗೆ ಜಮೆ ಮಾಡಿದ್ದಾರೆಂದು ಆದೇಶದಲ್ಲಿ ತಿಳಿಸಿದ್ದು ಅಧಿಕಾರಿ ವಿರುದ್ಧ ಕ್ರಿಮಿನಿಲ್ ಪ್ರಕರಣ ದಾಖಲಿಸಬೇಕೆಂದು ತರೀಕೆರೆ ಕಂದಾಯ ಉಪವಿಭಾಗಾಧಿಕಾರಿಗೆ ಆದೇಶಿಸಿದ್ದರು.

 

ಈ ಸಂಬಂಧ ತಹಶೀಲ್ದಾರ್ ಕಚೇರಿಯ ಮುಂದೆ ಕಲ್ಕೆರೆ ರೈತರು ಭಾನುವಾರವೂ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಎಂ.ಪಿ.ಕವಿರಾಜ್ ತೆರಳಿ, ಆರೋಪಿಯನ್ನು ಅಮಾನತು ಮಾಡಲಾಗಿದೆ. ಅವರ ಬಂಧನವೂ ಆಗಿದೆ. ಪ್ರತಿಭಟನೆ ನಿಲ್ಲಿಸಿ ಎಂದು ಮನವಿ ಮಾಡಿದರು. ಆದರೆ, ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಹೇಳಿಕೆ ನೀಡಬೇಕು. ಫಾಲಾಕ್ಷ ಮೂರ್ತಿ ಜೊತೆ ಸಹಕರಿಸಿರುವ ನಾಲ್ವರು ಮಧ್ಯ ವರ್ತಿಗಳನ್ನು ಬಂಧಿಸಬೇಕು. ಪರಿಹಾರ ಹಣ ನೀಡುವವರೆಗೆ ನಿಲ್ಲಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದರು.

ಮಂಗನ ಕಾಯಿಲೆ | ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ 49 ಪಾಸಿಟಿವ್ ಪ್ರಕರಣ ವರದಿ

 

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದ್ದು, ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಇದನ್ನೂ ಓದಿ; ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ

ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ:
ಮಂಗನ ಕಾಯಿಲೆ ಚಿಕಿತ್ಸೆ ಕುರಿತು ಶನಿವಾರ ಡಿ.ಎಚ್.ಒ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೋವಿಡ್ ಸೋಂಕಿನ ಮೇಲ್ವಿಚಾರಣೆಗೆ ತಜ್ಞ ವೈದ್ಯರ ನೇತೃತ್ವದಲ್ಲಿ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರಂಭಿಸಿದ್ದ ಟೆಲಿ ಐಸಿಯು ವ್ಯವಸ್ಥೆ ಇನ್ನು ಮುಂದೆ ಮಂಗನ ಕಾಯಿಲೆ (ಕೆ.ಎಫ್.ಡಿ) ಸೋಂಕಿತರ ನೆರವಿಗೆ ಬಳಕೆಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಣದೀಪ್ ಹೇಳಿದರು. ಈಗ ಕೋವಿಡ್ ಸೋಂಕು ಕಡಿಮೆ ಆಗಿದೆ. ಹೀಗಾಗಿ ಈ ತಜ್ಞರ ತಂಡ ಕೆ.ಎಫ್.ಡಿ ವಿರುದ್ಧದ ಹೋರಾಟಕ್ಕೆ ಬಳಕೆಯಾಗಲಿದೆ. ಸೋಂಕಿತರಿಗೆ ಚಿಕಿತ್ಸೆಯ ಸಲಹೆ, ವೈದ್ಯಕೀಯ ನೆರವಿನ ಬಗ್ಗೆ ಸಂಬಂಧಿಸಿದವರೊಂದಿಗೆ ದಿನದ 24 ಗಂಟೆಯ ಸಂಪರ್ಕದಲ್ಲಿರುತ್ತದೆ. ಸೋಂಕಿತರಿಗೂ ಸಲಹೆ ಸೂಚನೆ ನೀಡಲಿದ್ದಾರೆ ಎಂದರು.

ಎರಡು ಜಿಲ್ಲೆಗಳಲ್ಲಿ ಇಬ್ಬರು ಸಾವು:
ವಾಡಿಕೆಯಂತೆ ಈ ವರ್ಷವೂ ಮೂರು ಜಿಲ್ಲೆಗಳಲ್ಲಿ ಕೆ.ಎಫ್.ಡಿ ಪ್ರಕರಣಗಳು ವರದಿಯಾಗಿವೆ. ಜ.1 ರಿಂದ ಫೆ.2 ರವರೆಗೆ ರಾಜ್ಯದಲ್ಲಿ ಒಟ್ಟು 2,288 ಕೆ.ಎಫ್.ಡಿ ಪರೀಕ್ಷೆ ನಡೆಸಲಾಗಿದೆ. ಶಿವಮೊಗ್ಗದಲ್ಲಿ 12, ಉತ್ತರ ಕನ್ನಡ 34 ಹಾಗೂ ಚಿಕ್ಕಮಗಳೂರಿನಲ್ಲಿ 3 ಸೇರಿ ಒಟ್ಟು 49 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

ವೈದ್ಯಾಧಿಕಾರಿಗಳಿಗೆ ಸೂಚನೆ:
ಮಂಗನ ಕಾಯಿಲೆ (ಕೆಎಫ್‌ಡಿ) ಕಂಡುಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಕಂಡರೂ ಪರೀಕ್ಷೆ ಮಾಡಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮ ವಹಿಸಬೇಕು. ಕೆ.ಎಫ್.ಡಿ ಸೋಂಕು ಪಾಸಿಟಿವ್ ಎಂದು ಗೊತ್ತಾದ ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು. ರೋಗ ಪ್ರಸರಣ ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್ವರೆಗೆ ಇದ್ದು, ಈ ವೇಳೆ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಮೀಸಲಿರಿಸಬೇಕು, ಅಗತ್ಯ ಔಷಧಿಗಳ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡಿಎಂಪಿ ವಿತರಣೆ:
ಕೊಪ್ಪ ಹಾಗೂ ಶೃಂಗೇರಿ, ಎನ್.ಆರ್. ಪುರ ತಾಲೂಕಿನ ಕಾಡಂಚಿನ ಗ್ರಾಮಗಳ ಜನರಿಗೆ ಆರೋಗ್ಯ ಇಲಾಖೆಯಿಂದ ಡಿಎಂಪಿ ಆಯಿಲ್ ವಿತರಿಸಲಾಗುತ್ತಿದೆ. ಮನೆಯಿಂದ ಹೊರಗೆ, ಅರಣ್ಯ ಪ್ರದೇಶಕ್ಕೆ ಹೋಗುವಾಗ ಕಡ್ಡಾಯವಾಗಿ ಡಿಎಂಪಿ ಆಯಿಲ್ ಹಚ್ಚಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಡಿಎಂಪಿ ಆಯಿಲ್ ಹಚ್ಚಿಕೊಂಡರೆ ಉಣುಗುಗಳು ಮೈಗೆ ಅಂಟಿ ಕಚ್ಚುವುದಿಲ್ಲ, ಇದರಿಂದ ಮಂಗನ ಕಾಯಿಲೆಯಿಂದ ಬಚಾವಾಗಬಹುದಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.