
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕನೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಕೂದುವಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಕೆ. ಎಲ್. ಹೂವೇಗೌಡ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಕೃಷಿಕ.

ಇಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಹೂವೇಗೌಡ ಅವರು ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿದೆ. ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಇದನ್ನೂ ಓದಿ: ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸ್ಟ್ರಿಕ್ಟ್ ರೂಲ್ಸ್; ಸರ್ಕಾರದಿಂದ ಹೊಸ ಆದೇಶ
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: BEL ನಿಂದ 350 ಹುದ್ದೆಗೆ ಅರ್ಜಿ ಆಹ್ವಾನ; ಆಕರ್ಷಕ ಸಂಬಳ













