ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಶಾಕ್ ನಿಂದ ರೈತನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ದಿನೇಶ್(34) ಮೃತ ರೈತ.
ಇದನ್ನೂ ಓದಿ: ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ

ಜಮೀನಿನಲ್ಲಿ ನೀರು ಹಾಯಿಸಲು ಮೋಟರ್ ಆನ್ ಮಾಡುವಾಗ ಕರೆಂಟ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ದಿನೇಶ್ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅನರ್ಹ BPL ರೇಷನ್ ಕಾರ್ಡ್ ರದ್ದು; ರಾಜ್ಯ ಸರ್ಕಾರ ಖಡಕ್ ಆದೇಶ..!; ನಿಮ್ಮ ಕಾರ್ಡ್ ರದ್ದಾಗಿದೆಯೇ ಚೆಕ್ ಮಾಡಿ
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದುಕೊಂಡು ಕೊಪ್ಪದ ವಿದ್ಯಾರ್ಥಿನಿ ಆತ್ಮಹತ್ಯೆ
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಹೆರ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಮೃತಳ ತಂದೆಯಾದ ಹರಂದೂರು ಗ್ರಾಮದ ಮಹೇಶ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗೂ ಮಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲೆಂದು ಕುಟುಂಬ ಸಮೇತರಾಗಿ ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ಶೆಟ್ಟಿ ವಾಸವಾಗಿದ್ದರು. ಆದರೆ ಮನೆಯಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.












