ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ (58) ಮೃತಪಟ್ಟ ರೈತ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ

ಮನೆಯ ಮುಂಭಾಗ ನಿಂತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿ ಮನೆಯ ಮುಂಭಾಗದಿಂದ 20 ಮೀಟರ್ ದೂರದಲ್ಲಿ ಮೃತ ದೇಹ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ತಣಿಗೆಬೈಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಿರಂತರವಾಗಿ ಗುರುಪುರ ಗ್ರಾಮದಲ್ಲಿ ಸಂಚಾರ ಮಾಡುತ್ತಿದ್ದ ಕಾಡಾನೆಯನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ












