ದತ್ತಪೀಠ ಕೇಸ್​ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದತ್ತ ಪೀಠ ಹಾಗೂ ಬಾಬಾ ಬುಡನ್ ದರ್ಗಾ ವಿವಾದದ ಸಂಬಂಧ ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚನೆ ಮಾಡಲಾಗಿದೆ.

 

ಇದನ್ನೂ ಓದಿ; ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ; ರಾಮ ಮಂದಿರ ಕಲಾಕೃತಿ ನಿರ್ಮಾಣ

ಈ ಸಂಪುಟ ಉಪಸಮಿತಿ ರಚನೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕಾನೂನು, ಸಂಸದೀಯ ಮತ್ತು ಸಚಿವರು, ವ್ಯವಹಾರಗಳು ಪ್ರವಾಸೋದ್ಯಮ ಎಚ್.ಕೆ ಪಾಟೀಲ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ಚಿಕ್ಕಮಗಳೂರು ಉಸ್ತುವಾರಿ ಸಚಿವ ಕೆಜೆ. ಜಾರ್ಜ್ ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ.

ಇದನ್ನೂ ಓದಿ; ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ಉಪಸಮಿತಿ ವಿವಾದಿತ ಪ್ರಕರಣವನ್ನು ಪರಿಶೀಲಿಸಿ ಸಮಗ್ರ ರೀತಿಯಲ್ಲಿ ತನ್ನ ಶಿಫಾರಸನ್ನು ನೀಡುವುದರಿಂದ, ರಾಜ್ಯ ಸರ್ಕಾರದ ನಿಲುವನ್ನು ವ್ಯಕ್ತಪಡಿಸಲು ಮತ್ತು ಸುಪ್ರೀಂ ಕೋರ್ಟ್ ನಲ್ಲಿ ಲಿಖಿತ ಆಕ್ಷೇಪಣೆ ಮತ್ತು ಹೇಳಿಕೆಯನ್ನು ಸಲ್ಲಿಸಲು ಸಹಾಯ ಮಾಡುತ್ತದೆ. ಈ ಕುರಿತು ಸೈಯದ್ ಘೌಸ್ ಮೊಹಿಯುದ್ದೀನ್ ಶಾಖಾದ್ರಿ ಈ ವಿವಾದದ ಬಗ್ಗೆ ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಖಾದ್ರಿ ಗುರು ದತ್ತಾತ್ರೇಯ ಪೀಠದ ದೇವಸ್ಥಾನ ಸಂವರ್ಧನ ಸಮಿತಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ.

 

ಇದನ್ನೂ ಓದಿ; ಏರ್‌ ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ; ಡಿಗ್ರಿ, ಡಿಪ್ಲೊಮ, ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ

ಸಚಿವ ಸಂಪುಟದ ತೀರ್ಮಾನಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ, ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಫೆ.12-23 ವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಿದ್ದರಾಮಯ್ಯ ಫೆ.16 ರಂದು ತಮ್ಮ 15ನೇ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

 

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶೃಂಗೇರಿ ಜಗದ್ಗುರುಗಳು ಬದಲು ಆಡಳಿತಾಧಿಕಾರಿ ಭಾಗಿ

ಶೃಂಗೇರಿ:  (ನ್ಯೂಸ್ ಮಲ್ನಾಡ್ ವರದಿ) ಅಯೋಧ್ಯೆ ಶ್ರೀರಾಮ ಮಂದಿಯರದಲ್ಲಿ ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ಕೆ ಶೃಂಗೇರಿ ಜಗದ್ಗುರುಗಳು ಗೈರಾಗಾಲಿದ್ದು, ಮಠದ ಪ್ರತಿನಿಧಿ ಭಾಗಿಯಾಗಲಿದ್ದಾರೆ ಎಂದು ಶೃಂಗೇರಿ ಮಠದ ಅಧಿಕೃತ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ; ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ

ಹಿರಿಯ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಹಾಗೂ ರಾಮ ಮಂದಿರ ಟ್ರಸ್ಟ್ ನ ಸದಸ್ಯರು ಆಗಿರುವ ಕಿರಿಯ ಜಗದ್ಗುರು ವಿಧುಶೇಖರ ಭಾರತೀತೀರ್ಥ ಸ್ವಾಮೀಜಿಗಳು ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ಕೆ ಗೈರಾಗಾಲಿದ್ದು, ಶೃಂಗೇರಿ ಮಠದ ಆಡಳಿತಾಧಿಕಾರಿ ಗೌರಿಶಂಕರ್ ಅಯೋಧ್ಯೆಗೆ ತೆರಳಲಿದ್ದಾರೆ.

ಇದನ್ನೂ ಓದಿ; ರೈತರೇ ಗಮನಿಸಿ; PM KISAN ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

ಸುಳ್ಳು, ಅಪಪ್ರಚಾರಕ್ಕೆ ಕಿವಿಕೊಡದಂತೆ ಕರೆ:
ಇನ್ನು ಅಯೋಧ್ಯೆ ರಾಮ ಮಂದಿರ ಕಾರ್ಯದಲ್ಲಿ ಶೃಂಗೇರಿ ಜಗದ್ಗುರುಗಳು ಭಾಗಿಯಾಗಲಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಸುಳ್ಳು ಸುದ್ದಿ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸಬಾರದು. ಅಯೋಧ್ಯೆಗೂ ಶೃಂಗೇರಿಗೂ ಅವಿನಾಭಾವ ಸಂಬಂಧವಿದೆ. ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ ಎಂದರು.

ರಾಮಭುಜಂಗ ಸ್ತೋತ್ರ ಪಠಣ:
ಭಗವಾನ್ ಶ್ರೀರಾಮನ ರಾಮಭುಜಂಗ ಸ್ತೋತ್ರ ಪಠಣ ಮಾಡುವಂತೆ ಕಿರಿಯ ಶ್ರೀಗಳು ನೀಡಿದ್ದು, ಕರೆ ಶಂಕರಾಚಾರ್ಯರು ಪಠಣ ಮಾಡಿರುವ ರಾಮನ ಶ್ಲೋಕದಲ್ಲಿ ಅದ್ಭುತ ಅರ್ಥವಿದೆ. ಕಳೆದ ದೀಪಾವಳಿಯಲ್ಲೇ ರಾಮ ಜಪ ಮಾಡಲು ಹೇಳಿದ್ದೇವೆ. ನಾಸ್ತಿಕರು ಕೂಡ ರಾಮಜಪ ಮಾಡುತ್ತಿದ್ದಾರೆ ಎಂದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.