ಕಡೂರು: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಹುಲಿಗೊಂದಿ ಹೊಸೂರು ಬಳಿ ರಸ್ತೆ ಬದಿಯ ಕಾಲುವೆಯಲ್ಲಿ ಯುವಕನ ಶವ ಪತ್ತೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ್ (21) ಎಂಬಾತನನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿತ್ತು.
ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?

ಯುವಕನನ್ನು ಸ್ನೇಹಿತರೇ ಕೊಲೆಗೈದಿದ್ದು, ಮಂಡ್ಯದ ನಾಗಮಂಗಲದ ಮನೋಜ್ ಮತ್ತು ಕೌಶಿಕ್, ಬೆಂಗಳೂರಿನ ಕಿರಣ್ ಹಾಗೂ ರಾಜು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ
ಏನಿದು ಘಟನೆ:
ಮೃತ ದರ್ಶನ್ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ದರ್ಶನ್ ಮೇಲೆ ಇತ್ತೀಚೆಗೆ ಕೊಲೆ ಯತ್ನ ಕೇಸ್ ದಾಖಲಾಗಿತ್ತು. 15 ದಿನಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ. ಬಳಿಕ ತನ್ನ ಇಬ್ಬರು ಸ್ನೇಹಿತರ ಜೊತೆ ದರ್ಶನ್ ಕಡೂರಿನ ಮಾಡಾಳು ಗ್ರಾಮದ ತನ್ನ ತಾತನ ಮನೆಗೆ ಬಂದಿದ್ದನು. ಈತನೊಂದಿಗೆ ಬಂದವರು ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದರು. ಗುರುವಾರ (ಫೆ.15) ರಾತ್ರಿ ಬೆಂಗಳೂರಿನಿಂದ ಮತ್ತೆ ಬಂದ ದರ್ಶನ್ ಸ್ನೇಹಿತರು, ಆತನನ್ನು ಕಾರಿನಲ್ಲಿ ಕರೆದೊಯ್ದಿದ್ದರು. ಬೆಂಗಳೂರಿನಿಂದ ಸ್ನೇಹಿತರು ಬಂದಿದ್ದಾರೆ, ಅವರ ಜೊತೆ ಹೊಲದ ಶೆಡ್ ನಲ್ಲಿ ಮಲಗುತ್ತೇನೆ ಎಂದು ದರ್ಶನ್ ತನ್ನ ತಾತನಿಗೆ ಹೇಳಿದ್ದ. ಆದರೆ, ತಾತ ಹೊಲಕ್ಕೆ ಹೋಗಿ ನೋಡಿದಾಗ ಶೆಡ್ ನಲ್ಲಿ ಯಾರೂ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿದ್ದಾನೆ ಎಂದು ತಿಳಿದ ತಾತ, ಮನೆಗೆ ಬಂದು ಮಲಗಿದ್ದರು. ಆದರೆ, ದರ್ಶನ್ ಬೆಳಗ್ಗೆ ಮನೆಗೆ ಬಾರದಿದ್ದಾಗ ಹುಡುಕಾಡಿದ್ದು, ಆತನ ಮೃತದೇಹ ಹುಲಿಗೊಂದಿ ಹೊಸೂರು ರಸ್ತೆ ಬಳಿಯ ಕಾಲುವೆಯಲ್ಲಿ ಪತ್ತೆಯಾಗಿತ್ತು.
ತನಿಖೆ ಕೈಗೊಂಡ ಕಡೂರು ಪೊಲೀಸರು 24 ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವೈಯಕ್ತಿಕ ನಿಂದನೆ ಘಟನೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ. ತನಿಖಾ ತಂಡಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಬಹುಮಾನ ಘೋಷಿಸಿದ್ದಾರೆ.
ನಕ್ಸಲರ ಗುಂಪಿನ ಮೇಲೆ ಆನೆ ದಾಳಿ! | ಚಿಕ್ಕಮಗಳೂರಿನ ಮೂಡಿಗೆರೆಯ ನಕ್ಸಲ್ ಅಂಗಡಿ ಸುರೇಶ್ ಬಂಧನ!
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್ ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ನಕ್ಸಲ್ ಸುರೇಶ್ ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ತಿಳಿದು ದಾಳಿ ನಡೆಸಿದ ಪೊಲೀಸರು ಸುರೇಶ್ ನನ್ನು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ 10 ವರ್ಷಗಳಿಂದ ನಕ್ಸಲ್ ಆಗಿದ್ದಾನೆ. ಸುರೇಶ್ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆಯನ್ನು ಕೂಡ ಪೊಲೀಸ್ ಇಲಾಖೆ ಮಾಡಿತ್ತು. ಸುರೇಶ್ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿದ್ದು, 10 ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬೇಕಾಗಿರುವ ಆರೋಪಿ. ಸದ್ಯ ಕೇರಳ ಪೊಲೀಸರ ವಶದಲ್ಲಿರುವ ಸುರೇಶ್ ನನ್ನು ಚಿಕ್ಕಮಗಳೂರಿಗೆ ಕರೆತರಲಿದ್ದಾರೆ.
ಇದನ್ನೂ ಓದಿ; ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಹೆಸರು ನೋಂದಾಯಿಸಿಕೊಳ್ಳಲು ಇಲ್ಲಿದೆ ವಿವರ












