ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಶಕ್ತಿ ಯೋಜನೆಯಡಿ ಸರ್ಕಾರ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದು, ಬಸ್ ನಿಲ್ದಾಣವನ್ನ ಮಹಿಳೆಯರು ಬಟ್ಟೆ ಒಣಗಿಸುವ ತಾಣವನ್ನಾಗಿ ಮಾಡಿಕೊಂಡು ಬಟ್ಟೆ ಒಣಗಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆಲೆ ಹತ್ತಾರು ಮಹಿಳೆಯರು ತಂಡ ಮಾಡಿಕೊಂಡು ಧಾರ್ಮಿಕ ಕ್ಷೇತ್ರಗಳಿಗೆ ಹೋಗುತ್ತಿದ್ದಾರೆ. ಹೀಗೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವ ಮಹಿಳೆಯರು ಕೊಟ್ಟಿಗೆಹಾರದಲ್ಲಿ ಬಸ್ ಕಾಯುತ್ತಾ ಅಲ್ಲೇ ಬಟ್ಟೆ ತೊಳೆದುಕೊಂಡು ಬಸ್ ನಿಲ್ದಾಣದಲ್ಲೇ ಬಟ್ಟರ ಒಣಗಿಸಿಕೊಂಡು ಕಾಲ ಕಳೆಯುತ್ತಿದ್ದಾರೆ.

ಇದನ್ನೂ ಓದಿ; ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
ರಾಜ್ಯದ ಯಾವುದೇ ಭಾಗದಿಂದ ಸರ್ಕಾರಿ ಬಸ್ಸಿನಲ್ಲಿ ಬಂದರೂ ಕೊಟ್ಟಿಗೆಹಾರದಲ್ಲಿ ಇಳಿಯಲೇಬೇಕು. ಫ್ರೀ ಬಸ್ಸಿನಲ್ಲಿ ಹೊರನಾಡಿಗೆ ಹೋಗಬೇಕಂದ್ರೆ ಕೊಟ್ಟಿಗೆಹಾರಕ್ಕೆ ಬಂದೇ ಹೋಗಬೇಕು. ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಗಳ ಸಂಖ್ಯೆ ತೀರಾ ಕಡಿಮೆ. ದಿನಕ್ಕೆ ಹೆಚ್ಚು ಅಂದರೆ ನಾಲ್ಕೈದು ಬಸ್ ಅಷ್ಟೆ ಸಂಚರಿಸುವುದು ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಬರುವ ಮಹಿಳೆಯರು ಫ್ರೀ ಬಸ್ ಕಾಯುತ್ತಾ ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಜಮಾಯಿಸಿರುತ್ತಾರೆ. ಹೀಗೆ ಬಂದವರು, ಕೊಟ್ಟಿಗೆಹಾರದಲ್ಲಿ ನೀರಿನ ಸೌಲಭ್ಯ ಚೆನ್ನಾಗಿ ಇರುವುದರಿಂದ ಅಲ್ಲೇ ಬಟ್ಟೆ ತೊಳೆದು ಅಲ್ಲೇ ಒಣ ಹಾಕುತ್ತಿದ್ದಾರೆ. ಬಸ್ ನಿಲ್ಲುವ ಜಾಗದ ನೆಲದ ಮೇಲೂ ಹಾಗೂ ಕಾಂಪೌಂಡ್ ಮೇಲೂ ಬಟ್ಟೆ ಹಾಕುತ್ತಿದ್ದಾರೆ. ಕಾಂಪೌಂಡ್ ಮೇಲಿನ ತಂತಿ, ರಾಡನ್ನೂ ಕೂಡ ಬಿಟ್ಟಿಲ್ಲ.
ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
ಇಡೀ ದಿನ ಬಸ್ ಕಾಯುವ ಮಹಿಳೆಯರು ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನೇ ಬಚ್ಚಲು ಮನೆ ಮಾಡಿಕೊಂಡು ಬಟ್ಟೆ ತೊಳೆದುಕೊಂಡು, ಒಣಗಿಸಿಕೊಂಡು ಬಸ್ ಬಂದ ಕೂಡಲೇ ಅವಸರವಸವಾಗಿ ಬಟ್ಟೆಯನ್ನ ಬ್ಯಾಗಿಗೆ ತುಂಬಿಕೊಂಡು ಹೋಗುತ್ತಿದ್ದಾರೆ. ಪ್ರಯಾಣಿಕರ ಈ ವರ್ತನೆಗೆ ಸ್ಥಳಿಯರು ಅಸಮಾಧಾನ ಹೊರಹಾಕಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು ಕೂಡ ಮಹಿಳೆಯರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ, ಉತ್ತರ ಕರ್ನಾಟಕದ ಮಹಿಳೆಯರು ಅಧಿಕಾರಿಗಳ ಅಥವಾ ಸ್ಥಳೀಯರ ಮಾತನ್ನ ಕೇಳುತ್ತಿಲ್ಲ. ಒಬ್ಬರಾದ ಮೇಲೊಬ್ಬರು ಬಟ್ಟೆ ತೊಳೆದು ಕಣ್ಣಿಗೆ ಕಂಡ ಜಾಗದಲ್ಲೆಲ್ಲಾ ಒಣ ಹಾಕುತ್ತಿದ್ದಾರೆ.
ಚಿಕ್ಕಮಗಳೂರು: ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಾಲ ಮಂದಿರದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕಿಯರನ್ನು ವೇಶ್ಯಾವಾಟಿಕೆಯ ಜಾಲಕ್ಕೆ ತಳ್ಳಿ ಅತ್ಯಾಚಾರಕ್ಕೆ ಕಾರಣವಾಗಿದ್ದ ನಾಲ್ವರು ಸೇರಿ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಘಟನೆ:
ಶಿವಮೊಗ್ಗದಲ್ಲಿ ಬಾಲಕಿಯೊಂದಿಗೆ ಸುತ್ತಾಡುತ್ತಿದ್ದ ಯುವಕನನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. 16 ವರ್ಷದ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಯುವಕನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ರೋ) ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ಬಾಲಕಿಯನ್ನು ಚಿಕ್ಕಮಗಳೂರಿನ ಬಾಲ ಮಂದಿರಕ್ಕೆ ಒಪ್ಪಿಸಿದ್ದರು.
ಬಾಲ ಮಂದಿರದಿಂದ ಮತ್ತೊಬ್ಬ 14 ವರ್ಷದ ಬಾಲಕಿಯೊಂದಿಗೆ ಹೊರಹೋಗಿದ್ದ ಬಾಲಕಿ, ವೇಶ್ಯಾವಾಟಿಕೆ ನಡೆಸುವವರ ಸಂಪರ್ಕಕ್ಕೆ ಸಿಲುಕಿದ್ದಾರೆ. ಈ ಇಬ್ಬರು ಬಾಲಕಿಯರನ್ನು ಹಾಸನದ ಮತ್ತೊಬ್ಬ ಮಧ್ಯವರ್ತಿಯ ಬಳಿ ಚಿಕ್ಕಮಗಳೂರಿನ ಮಧ್ಯವರ್ತಿ ಕಳುಹಿಸಿದ್ದಾರೆ. ಅಲ್ಲಿ ಇಬ್ಬರು ಬಾಲಕಿಯರ ಮೇಲೆ ಹಲವರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದು ಮೂಲಗಳ ಮಾಹಿತಿ, ಅಲ್ಲಿಂದ ಬಸ್ ಹತ್ತಿ ಬೆಂಗಳೂರಿಗೆ ತೆರಳಿ, ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದ್ದರು. ಅಷ್ಟರಲ್ಲಿ ಬಾಲ ಮಂದಿರದ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಧರ್ಮಸ್ಥಳದಿಂದ ಬಾಲಕಿಯರನ್ನು ಕರೆ ತಂದು ವಿಚಾರಿಸಿದಾಗ ವೇಶ್ಯಾವಾಟಿಕೆಗೆ ತಳ್ಳಿ, ಹಾಸನದಲ್ಲಿ ಹಲವರಿಂದ ಅತ್ಯಾಚಾರ ನಡೆದಿದೆ ಎಂಬುದನ್ನು ಬಾಲಕಿಯರು ಪೊಲೀಸರ ಮುಂದೆ ತಿಳಿಸಿದ್ದಾರೆ.
ಚಿಕ್ಕಮಗಳೂರಿನಿಂದ ಹಾಸನಕ್ಕೆ ಕಳುಹಿಸಿದ ಆರೋಪದಲ್ಲಿ ಮಧ್ಯವರ್ತಿ ದಂಪತಿ, ಹಾಸನದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾದ ದಂಪತಿ, ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಆರು ಮಂದಿ ಸೇರಿ ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಲ ಮಂದಿರದಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಳ್ಳಲು ಅವಕಾಶ ಇಲ್ಲ. ಆಗಿರುವ ಪ್ರಮಾದಕ್ಕೆ ಕಾರಣ ಕೇಳಿ ಕಾವಲುಗಾರರಿಗೆ ಬಾಲ ಮಂದಿರದ ಮುಖ್ಯಸ್ಥರು ನೋಟಿಸ್ ನೀಡಿದ್ದಾರೆ.












