ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಶಾಂತಿ ಉಂಟಾಗದಂತೆ ಕೆಲವರನ್ನು ಆಯಾ ಜಿಲ್ಲೆಗಳಿಂದ ಗಡಿಪಾರು ಮಾಡಲಾಗುತ್ತಿದೆ. ಅದರಂತೆ ಬಜಗರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್

ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ 17 ಕಾರಣಗಳನ್ನು ನೀಡಿ ಜಿಲ್ಲಾಡಳಿತ ಗಡಿಪಾರು ಮಾಡಿದೆ.

ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಮಂಜು, ಬಿಜೆಪಿ ಪಕ್ಷದೊಂದಿಗೆ ಸೇರಿಕೊಂಡು ಅಶಾಂತಿ ವಾತಾವರಣ ಸೃಷ್ಟಿಸಿ, ಮತದಾರರಿಗೆ ಹಣದ ಆಮಿಷ ಒಡ್ಡಿ, ಸ್ವತಂತ್ರವಾಗಿ ಮತದಾನ ಮಾಡಲು ಅಡ್ಡಿ ಉಂಟು ಮಾಡುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಎರಡು ತಿಂಗಳ ಕಾಲ ಅಂದರೆ ಜೂನ್ 10 ರವರೆಗೂ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಾಳೆಹೊನ್ನೂರು: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಬಾಳೆಹೊನ್ನೂರು ಸಮೀಪದ ಸೀಗೋಡು ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಮಹಿಳೆಯರಿಗೆ ಹೊಸ ಭಾಗ್ಯ!; ಸಿಗಲಿದೆ ಉಚಿತ ಸೋಲಾರ್ ಸ್ಟವ್; ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ
ಹಾಸನ ಜಿಲ್ಲೆಯ ಹೊಳೆನರಸೀಪುರ ಸಮೀಪದ ಮಹದೇವಪ್ಪ (30) ಸ್ಥಳದಲ್ಲೇ ಮೃತಪಟ್ಟ ಲೈನ್ ಮ್ಯಾನ್.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿಗೆ ನಾಲ್ವರು ಲೈನ್ ಮ್ಯಾನ್ ಹಾಗೂ ಅಧಿಕಾರಿಗಳು ರಿಪೇರಿಗೆ ತೆರಳಿದ್ದ ವೇಳೆ ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ಏಕಾಏಕಿ ಬಂದ ಕರೆಂಟ್ ನಿಂದ ಈ ಅವಘಡ ಸಂಭವಿಸಿದೆ.












