
ಚಿಕ್ಕಮಗಳೂರು (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ದೊರಕದೆ ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಲ್ದೂರ್ ಸಮೀಪದ ಗಾಳಿಗಂಡಿ ನಿವಾಸಿ ಲಕ್ಷ್ಮಣ್ (46) ಮೃತರು.
ಗುರುವಾರ ಮಧ್ಯಾಹ್ನ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಆಸ್ಪತ್ರೆಗೆ ದಾಖಲಿಸುವ ವೇಳೆ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿದ್ದರೂ ರೋಗಿಯನ್ನು ಕರೆದೊಯ್ಯಲು ಕನಿಷ್ಠ ವೀಲ್‌ಚೇರ್ ವ್ಯವಸ್ಥೆಯನ್ನೂ ಮಾಡದೆ ವಿಳಂಬ ಮಾಡಲಾಗಿದೆ. ಇದೇ ನಿರ್ಲಕ್ಷ್ಯದಿಂದ ಲಕ್ಷ್ಮಣ್ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ತವ್ಯ ಲೋಪ ಎಸಗಿದ ವೈದ್ಯರು ಹಾಗೂ ಸಿಬ್ಬಂದಿಯನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಅವರು ಜಿಲ್ಲಾ ಸರ್ಜನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಮಾತನಾಡಿ, ಮೃತರ ಕುಟುಂಬಸ್ಥರ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆಸ್ಪತ್ರೆಯಲ್ಲಿ ನಡೆದ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ಚಿಕಿತ್ಸೆಯಲ್ಲಿ ವಿಳಂಬವಾಗಿದೆ ಎಂಬುದು ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಚಾಕುವಿನಿಂದ ಇರಿದು ಕೊಲೆ: ಪರಾರಿಯಾಗಿದ್ದ ಆರೋಪಿಗಳ ಬಂಧನ
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ನಿಶ್ಚಿತಾರ್ಥವಾಗಿದ್ದ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕಳುಹಿಸಿದ್ದ ಕಾರಣಕ್ಕೆ ಆಕೆಯ ಸಹೋದರ ಸೇರಿದಂತೆ ಕೆಲವರು ಸೇರಿಕೊಂಡು ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬುಧವಾರ ಸಂಜೆ ವರದಿಯಾಗಿದೆ.
ತಾಲ್ಲೂಕಿನ ಉಡೇವಾ ಗ್ರಾಮದ ಮಂಜುನಾಥ್ (21) ಎಂಬ ಯುವಕನನ್ನು ಪಟ್ಟಣದ 206 ಬೈಪಾಸ್ ರಸ್ತೆಯ ಸಮೀಪದ ಅತ್ತಿನಾಳು ಗ್ರಾಮದ ಅಂಡರ್‌ಪಾಸ್ ಬಳಿ ಸಂಜೆ ಸುಮಾರು 7.45ರ ವೇಳೆಗೆ ಚಾಕುವಿನಿಂದ ಇರಿಯಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮೃತ ಮಂಜುನಾಥ್ ಅವರ ಸಂಬಂಧಿ ಉಡೇವಾ ಗ್ರಾಮದ ಕೋಟೇಶ್ ಎಂ. ಅವರು ನೀಡಿದ ದೂರಿನ ಮೇರೆಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಕಿರಣ್ ಹಾಗೂ ಮನು @ ಮನೋಜ್ ಎಂಬವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.













