ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಚಾಕುವಿನಲ್ಲಿ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಗ್ರಾಮದಲ್ಲಿ ನಡೆದಿದೆ. ಕೀರ್ತಿ (26) ಮೃತ ದುರ್ದೈವಿ. ಅವಿನಾಶ್ (32) ಪತ್ನಿಯನ್ನ ಕೊಂದ ಪತಿ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದವರಿಗೆ 50,000ರೂ ವರೆಗೆ ಸ್ಕಾಲರ್ ಶಿಪ್; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಕೀರ್ತಿ ಹಾಗೂ ಅವಿನಾಶ್ 4 ವರ್ಷದ ಹಿಂದೆ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ವೈಮನಸ್ಸು ಉಂಟಾಗಿ ಜಗಳವಾಗುತ್ತಿತ್ತು. ಇಂದು ಮಧ್ಯಾಹ್ನ ಜಗಳ ಜೋರಾಗಿದ್ದು, ಅವಿನಾಶ್ ತನ್ನ ಪತ್ನಿ ಕೀರ್ತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ಧಾನೆ.
ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ವಿಷಯ ತಿಳಿಯುತ್ತಿದಂತೆ ಕೀರ್ತಿ ಪೋಷಕರು ಆಕೆಯನ್ನು ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆ ಮಾಡಿದ ಬಳಿಕ ಅವಿನಾಶ್ ಎಸ್ಕೆಪ್ ಆಗಿದ್ದಾನೆ. ಪೊಲೀಸರು ಆತನಿಗಾಗಿ ಶೋಧ ಕಾರ್ಯ ನಡೆಸಿಸುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಆಸ್ತಿ ನೋಂದಣಿಗೆ ಇ-ಸಹಿ ಕಡ್ಡಾಯ; ಹೊಸ ನಿಯಮ ಜಾರಿ!












