ಚಿಕ್ಕಮಗಳೂರು: ಎಚ್ಚರಿಕೆ ಬಳಿಕವೂ ತೋಟಕ್ಕೆ ಕಾರ್ಮಿಕರನ್ನು ಕಳಿಸಿದರೆ ಕೇಸ್:‌ ಸಚಿವ ಈಶ್ವರ್‌ ಖಂಡ್ರೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೇಸಿಗೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚುವ ಹಿನ್ನೆಲೆಯಲ್ಲಿ ನಿಗಾ ಇಡುವಂತೆ ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವ‌ರ್ ಖಂಡ್ರೆ ಸೂಚನೆ ನೀಡಿದ್ದು, ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಹುಣಸೆಹಳ್ಳಿಯಲ್ಲಿ ಕೆಲಸಕ್ಕಾಗಿ ಕಾರ್ಮಿಕರನ್ನು ತೋಟಕ್ಕೆ  ಕಳುಹಿಸಿದ ಜಮೀನು ಮಾಲೀಕರ ವಿರುದ್ಧ ದೂರು ದಾಖಲಿಸುವಂತೆ ಸೂಚನೆ ನೀಡಿದರು.

ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ತುರ್ತು ವಿಡಿಯೋ ಸಂವಾದ ನಡೆಸಿದರು. ಚಿಕ್ಕಮಗಳೂರಿನಲ್ಲಿ ಕಳೆದ ವಾರ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ಬಳಿಕ, ಕಾಡಾನೆ ಸೆರೆಗೆ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳೀಯರಿಗೆ ತೋಟಕ್ಕೆ ಹೋಗದಂತೆ ಮಾಹಿತಿ ನೀಡಲಾಗಿದ್ದರೂ ತೋಟಕ್ಕೆ ಹೋದ ಕಾರಣ ಈ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಸಚಿವರು ಇದಕ್ಕೆ ಪ್ರತಿಕ್ರಿಯಿಸಿದ್ದು, ಇಲಾಖೆ ಮುನ್ನೆಚ್ಚರಿಕೆ ನೀಡಿದ ಬಳಿಕವೂ ತೋಟದ ಮಾಲೀಕರು ಕಾರ್ಮಿಕರನ್ನು ತೋಟಕ್ಕೆ ಕಳುಹಿಸಿದರೆ ಅಂತಹ ಮಾಲೀಕರಿಗೆ ಎಚ್ಚರಿಕೆ ನೀಡಿ, ನಿರ್ಲಕ್ಷ್ಯ ತೋರಿದರೆ ದೂರು ದಾಖಲಿಸಿ ಎಂದು ತಿಳಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.