ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆಯಾಗಿದ್ದಾರೆ ಎಂಬ ಕಾಂಗ್ರೇಸ್ ವಿರುದ್ಧ ಪೋಸ್ಟರ್ ಅಂಟಿಸಿರುವುದನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಟೀಕಿಸಿದ್ದಾರೆ.
ಇದನ್ನೂ ಓದಿ; ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ಗ್ಯಾಸ್ ಬೆಲೆ?

ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಪತ್ತೆಯಾಗಿರುವುದು ಜಿಲ್ಲಾ ಉಸ್ತುವಾರಿ ಸಚಿವರಲ್ಲ, ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಎಂದು ಟೀಕಿಸಿದ್ದರು. ರಾಜ್ಯದಲ್ಲಿ ಅಧಿಕಾರ ಇದೆ ಎಂದು ಮೆರೆಯುತ್ತಿದ್ದ ಬಿಜೆಪಿಯ ಅವರು ಅಧಿಕಾರ ಹೋದ ಮೇಲೆ ಬಿಜೆಪಿಗರು ಹತಾಶರಾಗಿದ್ದಾರೆ. ಅಂದು ಬಿಜೆಪಿ ಆಡಳಿತದಲ್ಲಿ ಉಸ್ತುವಾರಿ ಸಚಿವರಾಗಿದ್ದ ಸಿ.ಟಿ.ರವಿ ಅವರ ಅವಧಿಯಲ್ಲಿ ಉಸ್ತುವಾರಿ ಸಚಿವರ ಕಛೇರಿಯನ್ನೇ ತೆರೆಯಲಿಲ್ಲ. ಅಷ್ಟೇ ಅಲ್ಲ ಈಶ್ವರಪ್ಪ ಹೋದ ಮೇಲೆ ಅವರ ನಂತರ ಆರು ತಿಂಗಳು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಇಲ್ಲದೆ ಜಿಲ್ಲೆ ಅನಾಥವಾಗಿದ್ದನ್ನು ಬಿಜೆಪಿಯವರು ಮರೆತಿದ್ದಾರೆ ಎಂದರು.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
ಜಿಲ್ಲೆಯಲ್ಲಿ ಹಲವು ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು:
ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಅಧಿಕಾರ ವಹಿಸಿಕೊಂಡ ಮೇಲೆ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ನಂತರ ಜಿಲ್ಲಾ ಮಟ್ಟದ ಅಧಿಕಾರಗಳೊಂದಿಗೆ ಸಭೆ, ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಕುರುತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. 2023-24 ನೇ ಸಾಲಿನ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಹಾಗೂ ಪರಿಹಾರ ಕ್ರಮಗಳ ಕುರಿತು ಸಭೆಯನ್ನು ನಡೆಸಿದ್ದು, ಜಿಲ್ಲೆಯ ಕಂದಾಯ, ಕೆಪಿಟಿಸಿಎಲ್ ಮತ್ತು ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಜಿಲ್ಲಾ ಕೆಡಿಪಿ ಸಭೆಯನ್ನು ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷ ಬೇಜವಾಬ್ದಾರಿ ತನದ ಪ್ರದರ್ಶನವನ್ನು ಮಾಡಿಲ್ಲ:
ಸಿ.ಟಿ.ರವಿಯವರು, ಈಶ್ವರಪ್ಪನವರು, ಬೈರತಿ ಬಸವರಾಜ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯಲ್ಲಿ ಎಷ್ಟು ಪ್ರಗತಿ ಪರಿಶೀಲನಾ ಸಭೆಯನ್ನು ಮಾಡಿದ್ದಾರೆ. ಬಿಜೆಪಿಯುವರು ಅಧಿಕಾರದಲ್ಲಿದ್ದಾಗ ಬೇಜವಾಬ್ದಾರಿಯಿಂದ ಆಡಳಿತ ನಡೆಸಿದ್ದು, ಆ ರೀತಿ ಕಾಂಗ್ರೆಸ್ ಪಕ್ಷ ಬೇಜವಾಬ್ದಾರಿ ತನದ ಪ್ರದರ್ಶನವನ್ನು ಮಾಡಿಲ್ಲ.
ಜಿಲ್ಲೆಯ ಹಿತವನ್ನ ಬಲಿಕೊಟ್ಟಿದ್ದ ಬಿಜೆಪಿ:
ಉಸ್ತುವಾರಿ ಸಚಿವರು ಅಧಿಕಾರ ವಹಿಸಿಕೊಂಡ ನಂತರ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ಜಿಲ್ಲಾ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಿರುವುದು ಅವರ ಜವಾಬ್ದಾರಿಯನ್ನು ಎತ್ತಿತೋರಿಸುತ್ತದೆ ಅಲ್ಲದೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವಂತ ಕಂದಾಯ ಮತ್ತು ಅರಣ್ಯ ಇಲಾಖೆಯ ಸಮಸ್ಯೆಗಳಿಗೆ ಸ್ಪಂದಿಸುವಂತಹ ಸಭೆಗಳನ್ನು ನಡೆಸಿದ್ದಾರೆ. ಬಿಜೆಪಿಯವರು ಅಧಿಕಾರ ಇದ್ದಾಗ ಜಿಲ್ಲೆಯ ಹಿತವನ್ನು ಬಲಿಕೊಟ್ಟಿದ್ದಾರೆ. ನಗರಸಭೆ ಆಡಳಿತ ಬಿಜೆಪಿ ಕೈಯಲ್ಲಿದ್ದರೂ ಅಂತರಿಕ ಕಚ್ಚಾಟದಿಂದ ನಗರದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಸರ್ಕಾರ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳು ಜನರ ಮನಸ್ಸಿನಲ್ಲಿ ಉಳಿದಿದೆ ಎಂದು ಹೇಳಿದರು.
ಕೇಂದ್ರ ಸಚಿವೆ ವಿರುದ್ಧ ಕಿಡಿ:
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜಿಲ್ಲೆಯಲ್ಲಿ ಉದ್ಭವಿಸಿರುವ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ನೆರೆ ಬಂದಾಗಲೂ ಜಿಲ್ಲೆಗೆ ಬೇಟಿ ನೀಡಿಲ್ಲ. ರಸಗೊಬ್ಬರ ಸಮಸ್ಯೆ ಬಗೆಹರಿಸಲು ವಿಫಲರಾಗಿದ್ದು, ಉತ್ತಮವಾದ ಯೋಜನೆಗಳನ್ನು ಕೈಗೊಳ್ಳಲು ಧ್ವನಿ ಎತ್ತಿಲ್ಲ. ಕನಿಷ್ಠ ಸೌಜನ್ಯಕ್ಕಾದರೂ ಜಿಲ್ಲೆಗೆ ಭೇಟಿ ನೀಡಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಟೀಕಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ:
ಮುಂದಿನ ದಿನಗಳಲ್ಲದರೂ ಬಿಜೆಪಿ ವಿರೋಧ ಪಕ್ಷವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಜೊತೆ ಕೈಜೋಡಿಸಬೇಕು. ಕಾಂಗ್ರೆಸ್ ಪಕ್ಷ ಜನಪರವಾಗಿ ಕೆಲಸ ಮಾಡಲಿದ್ದು, ಕಾಂಗ್ರೆಸ್ ಪಕ್ಷವನ್ನು ಟೀಕಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದರು.












