
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿರುವ ಪರಿಣಾಮ ಜೀಪ್ ನಲ್ಲಿದ್ದ ದಂಪತಿ ಪೈಕಿ ಪತ್ನಿ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳವಾಸೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!


ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳನ್ನು ಚಿಕ್ಕಮಗಳೂರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಪತ್ನಿ ಮೀನಾಕ್ಷಿಯವರು (62) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಜೀಪ್ ಚಲಾಯಿಸುತ್ತಿದ್ದ ಪತಿ ಅಪ್ಪುಸ್ವಾಮಿಗೌಡ ಅವರ ತಲೆ ಮತ್ತು ಕಾಲಿನ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!
ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಕೊಟ್ಟಿಗೆಹಾರ: ದಾಖಲೆ ತೋರಿಸಿದರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ಬೆನ್ನಲ್ಲೇ ದೇವತಾ ಕಾರ್ಯಕ್ಕೆ ಹಣ ಕೊಂಡೊಯ್ಯುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇಕ್ಕಟ್ಟಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ
ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ
ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಈ ನಿಯಮವೇ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಚುನಾವಣಾ ಅಧಿಕಾರಿಗಳ ಧೋರಣೆಯಿಂದ ಸಾರ್ವಜನಿಕರು ಪರದಾಟ ಅನುಭವಿಸುವಂತಾಗಿದೆ.












