ಕಳಸ: (ನ್ಯೂಸ್ ಮಲ್ನಾಡ್ ವರದಿ) ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಹಂಚಿಕೊಂಡಿರುವ ಆರೋಪದಡಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್

ಇನ್ಸ್ಟಾಗ್ರಾಮ್, ಫೇಸ್ ಬುಕ್, ಟೆಲಿಗ್ರಾಂ ಖಾತೆಯಲ್ಲಿ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡಿದ್ದು, ಇದರ ಜೊತೆ ಮಹಿಳೆಯರ ಖಾಸಗಿತನಕ್ಕೆ ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡುವಂತಹ ಕಾಮ ಪ್ರಚೋದಕ ವಾಕ್ಯಗಳನ್ನು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದನು ಎಂಬ ಆರೋಪದಡಿ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; APL ಹಾಗೂ BPL ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
ಶೃಂಗೇರಿ: ಆಟೋ ಹಾಗೂ ಕಾರಿನ ನಡುವೆ ಅಪಘಾತ, ಹಲವರಿಗೆ ಗಾಯ
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವೃದ್ದೆಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಸಮೀಪ ನಡೆದಿದೆ. ಸಣ್ಣಮ್ಮ (65) ಗಂಭೀರ ಗಾಯವಾಗಿರುವ ವೃದ್ದೆ.
ಇದನ್ನೂ ಓದಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಮಂಗಳೂರು ಮೂಲದ ಕಾರು ಹಾಗೂ ಶೃಂಗೇರಿಯ ಆಟೋದ ನಡುವೆ ಡಿಕ್ಕಿಯಾಗಿದ್ದು, ಪರಿಣಾಮ ಮೂವರು ಪ್ರಯಾಣಿಕರು ಹಾಗೂ ಚಾಲಕ ರವಿ ಶೆಟ್ಟಿಗೆ ಗಾಯವಾಗಿದೆ. ಇನ್ನು ಆಟೋದಲ್ಲಿದ್ದ ಪ್ರಯಾಣಿಕರು ಶೃಂಗೇರಿ ತಾಲೂಕಿನ ಹಾಲಂದೂರು ಸಮೀಪದ ಕೊಡೂರಿನವರು ಎನ್ನಲಾಗಿದ್ದು, ಗಾಯಾಳುಗಳನ್ನು ಶೃಂಗೇರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ
ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












