ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆ ಅಬ್ಬರಿಸಿತ್ತು. ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 8000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಹೌದು, ಚಿಕ್ಕಮಗಳೂರು ದಕ್ಷಿಣಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173 ಚಾರ್ಮಾಡಿ ಘಾಟಿ ನಲ್ಲಿ ಭೂ ಕುಸಿತ ಉಂಟಾಗಿದೆ.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನ ಅಲೆಖಾನ್ ಬಳಿ ಭೂ ಕುಸಿತ ಉಂಟಾಗಿದ್ದು, ಘಟನಾ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ಭೂಕುಸಿತ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್, ಸೋಮೇಗೌಡ, ಬಣಕಲ್ ಸಬ್ ಇನ್ಸ್ಪೆಕ್ಟರ್ ರೇಣುಕಾ, ಹೈವೇ ಪೆಟ್ರೋಲ್ ಮತ್ತು ಪೊಲೀಸರು ಇದ್ದರು. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ದೇವರಮನೆ ಸಾಗುವ ಬಣಕಲ್ ವಿಲೇಜ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆಗೆ ಹೋಗುವ ಬಣಕಲ್ ವಿಲೇಜ್ ಸಮೀಪ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ದೇವರಮನೆಗೆ ಸಾಗುವ ಬಣಕಲ್ ವಿಲೇಜ್ ರಸ್ತೆ ಕಿರಿದಾಗಿದ್ದು, ಭಾರಿ ವಾಹನಗಳ ಓಡಾಟ ಕಷ್ಟವಾಗಿದೆ. ಆದರೂ ಕಿರಿದಾದ ರಸ್ತೆಯಲ್ಲಿ ಪ್ರವಾಸಿಗರ ಬಸ್ಸುಗಳ ಓಡಾಟದಿಂದ ದೇವರು ಮನೆ ಸಂಪರ್ಕಿಸುವ ರಸ್ತೆ ಸುಮಾರು ಎರಡು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಕಾಫಿ ತೋಟ ಹಾಗೂ ಕೃಷಿ ಜಮೀನಿಗೆ ಸಾಗಲು ಸ್ಥಳೀಯರು ಪರದಾಡಿದ್ದು, ಪ್ರವಾಸಿಗರ ವಿರುದ್ದ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.