ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದತ್ತಪೀಠದ ಶಾಖಾದ್ರಿ ಮನೆಯಲ್ಲಿ ಚಿರತೆ ಹಾಗೂ ಜಿಂಕೆ ಚರ್ಮ ಪತ್ತೆ ಪ್ರಕರಣ ಸಂಬಂಧಿಸಿದಂತೆ ಶಾಖಾದ್ರಿ ಗೌಸ್ ಮೊಹಿದ್ದೀನ್ ಮೇಲೆ ವೈಲ್ಡ್ ಲೈಫ್ ಆಕ್ಟ್ ನಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಶಾಖಾದ್ರಿ ಕುಟುಂಬದ ಹಿರಿಯರು ವನ್ಯಜೀವಿಯೊಂದರ ಚರ್ಮದ ಹಾಸಿನ ಮೇಲೆ ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗುತ್ತಿದ್ದಂತೆ ಈ ಸಂಬಂಧ ಬಂದ ದೂರನ್ನು ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮನೆಗೆ ಬೀಗ ಹಾಕಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದ ಮನೆ ಮುಂದೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಕಾದು ಕಾದು ಸುಸ್ತಾದ ಅಧಿಕಾರಿಗಳು ಶಾಖಾದ್ರಿ ಅವರ ಮನೆಗೆ ಸರ್ಚ್ ವಾರೆಂಟ್ ಜಾರಿಗೊಳಿಸಿದ್ದರು. ಈ ವೇಳೆ ಶಾಖಾದ್ರಿ ಅವರು ತಾವು ಬೆಂಗಳೂರಿನಲ್ಲಿ ಇದ್ದು ಸಂಜೆ ಆರು ಗಂಟೆ ವೇಳೆಗೆ ಬರುವುದಾಗಿ ತಿಳಿಸಿದ್ದರು.
ಇದನ್ನೂ ಓದಿ; ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
ಶಾಖಾದ್ರಿ ಅವರು ಬಾರದೆ ಬಸ್ ನಲ್ಲಿ ಮನೆಯ ಕೀ ಕಳಿಸಿಕೊಟ್ಟಿದ್ದರು. ಅಧಿಕಾರಿಗಳ ಕೈಗೆ ಮನೆಯ ಕೀ ಸಿಗುತ್ತಿದ್ದಂತೆ ಮನೆಯನ್ನು ಜಾಲಾಡಿದಾಗ ಚಿರತೆ ಮತ್ತು ಜಿಂಕೆ ಚರ್ಮ ಪತ್ತೆಯಾಗಿತ್ತು. ಚರ್ಮವನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಸಿಬ್ಬಂದಿ ಎಫ್.ಎಸ್.ಎಲ್ ವರದಿಗೆ ಚರ್ಮ ಕಳಿಸಲು ಮುಂದಾಗಿದ್ದು, ಸದ್ಯ ಚಿಕ್ಕಮಗಳೂರು ವಲಯದ ಅರಣ್ಯಾಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.
ಹುಲಿ ಉಗುರು ಹೊಂದಿದ್ದ ಆರೋಪ: ಎನ್ ಆರ್ ಪುರದಲ್ಲಿ DRFO ದರ್ಶನ್ ಅರೆಸ್ಟ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ಅದರಲ್ಲಿ ಕಳಸದ ಅರಣ್ಯಾಧಿಕಾರಿಯೊಬ್ಬ ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.
ಡಿ.ಆರ್.ಎಫ್.ಓ ದರ್ಶನ್ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿದ್ದು, ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ ಸೂಚಿಸಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪದ ಡಿ.ಎಫ್.ಓ ನಂದೀಶ್ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.
ಏನಿದು ಪ್ರಕರಣ:
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಅರಣ್ಯ ರಕ್ಷಕರು, ವನ್ಯಜೀವಿ ರಕ್ಷಕರು ಎಂದು ಹೇಳಿಕೊಳ್ಳುವ ಅರಣ್ಯ ಅಧಿಕಾರಿಯೊಬ್ಬ ಹುಲಿ ಉಗುರಿನ ಡಾಲರ್ ಧರಿಸಿದ ಆರೋಪ ಕೇಳಿಬಂದಿತ್ತು. ಹುಲಿ ಉಗುರು ಧರಿಸಿದ ಆರೋಪದ ಹಿನ್ನಲೆ ಕಳಸದ ಡಿಆರ್ಎಫ್ಓ ದರ್ಶನ್ ಎಂಬಾತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿತ್ತು. ದರ್ಶನ್ ಹುಲಿಯ ಉಗುರಿನ ಡಾಲರ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶೋಕಿ ಮಾಡಿದ್ದ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ದರ್ಶನ್ ಫೋಟೋ ಡಿಲಿಟ್ ಕೂಡ ಮಾಡಿದ್ದ.












