ಚಿಕ್ಕಮಗಳೂರು: ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ | ಮಾಜಿ ಶಾಸಕ ಸಿ.ಟಿ.ರವಿ ಆಹ್ವಾನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಶಾಸಕ ಸಿ.ಟಿ.ರವಿ ಮನವಿ ಮಾಡಿದ್ದರು.

 

ಇದನ್ನೂ ಓದಿ; ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ಗ್ಯಾಸ್ ಬೆಲೆ?

ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು, ಸಮಾಜ ಇದನ್ನೇ ಕೇಳುವುದು, ಮಾಜಿ ಸಿಎಂ ಹೆಚ್.ಡಿ.ಕೆ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ ಆಗಬೇಕು. ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ಸಿದ್ರಾಮ ಇದ್ದಾನೆ ಎಂದಿದ್ದಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ. ನೀವು ಮಾಲೆ ಹಾಕಿದೆ ಮೇಲೆ ಜಮೀರ್ ಅವರು ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ ಎಂದರು.

 

ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ;  15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು. ಯಾರೂ ಎಲೆಕ್ಷನ್ ಟೈಂ ಹಿಂದೂಗಳಾಗಬಾರದು, ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು, ಮುಂದಕ್ಕೆ ನೋಡಬೇಕು ಸಿದ್ದರಾಮಯ್ಯನವರು ಬರಲಿ ಎಂದು ಮನವಿ ಮಾಡುತ್ತೇನೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.

 

ಚಿಕ್ಕಮಗಳೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ಸದ್ಯ ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಮರವಂಜಿ ಗ್ರಾಮದಲ್ಲಿ ಭಾನುವಾರ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿ ಸೇವಿಸಿದ ಕೆಲವರಲ್ಲಿ ಸೋಮವಾರ ವಾಂತಿ-ಭೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡರು. ಕೂಡಲೇ ಗ್ರಾಮಸ್ಥರು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇನ್ನು ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.